ಮುಲ್ಕಿ: ಬಸ್ ನಿಲ್ದಾಣ ಬಳಿ ಪ್ರಯಾಣಿಕರಿಗಾಗಿ ನಿಂತಿದ್ದ ಆಟೋ ಗೆ ಅತೀ ವೇಗದಿಂದ ಬಂದ ಮಂಗಳೂರು ಕಡೆಯಿಂದ ಹೆದ್ದಾರಿಯಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಸ್ಥಳೀಯರ ಹಾಗೂ ಮಂಗಳೂರ ಉತ್ತರ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆಯಿಂದ ಕಾರು ಚಾಲಕನನ್ನು ಹಾಗೂ ಅದರಲ್ಲಿದ್ದವರನ್ನು ದ.ಕ ಗಡಿಭಾಗದ ಹೆಜಮಾಡಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಮಣಿಪಾಲದ ಮೂಲದ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಮಣಿಪಾಲ ಮೂಲದ ಕಾಲೇಜು ವಿದ್ಯಾರ್ಥಿಗಳು ಬಾಡಿಗೆ ಕಾರಿನಲ್ಲಿ ಮಂಗಳೂರಿನ ತಣ್ಣೀರು ಬಾವಿಯಿಂದ ಅತಿವೇಗದ ಚಾಲನೆ ಮೂಲಕ ಮಣಿಪಾಲಕ್ಕೆ ಹೊರಟಿದ್ದು ಮುಲ್ಕಿ ಬಸ್ ನಿಲ್ದಾಣದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ವೇಗ ತಡೆಗೆ ಇರಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಕಾದು ಕುಳಿತಿದ್ದ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭ ಆಟೋ ಚಾಲಕರಾದ ಎಳತ್ತೂರು ನಿವಾಸಿ ಪ್ರಶಾಂತ್ ನೆಲಗುಡ್ಡೆ, ಕೊಲ್ನಾಡು ನಿವಾಸಿ ಪ್ರಭಾಕರ ಶೆಟ್ಟಿ ಪವಾಡ ಸದೃಶ ಪಾರಾಗಿದ್ದು, ಆಟೋಗಳು ಜಖಂಗೊಂಡಿದೆ
ಅಪಘಾತದ ಸಂದರ್ಭ ಕಾರ್ ಚಾಲಕ ಮತ್ತಷ್ಟು ಗಲಿಬಿಲಿ ಗೊಂಡಿದ್ದು ಕಾರನ್ನು ರಿವರ್ಸ್ ತೆಗೆಯುವ ಯತ್ನದಲ್ಲಿ ಭಾರೀ ಗಾತ್ರದ ಕಲ್ಲಿಗೆ ಡಿಕ್ಕಿ ಹೊಡೆದಾಗ ಕಾರಿನ ಟಯರ್ ಪಂಕ್ಚರ್ ಆಗಿದೆ. ಆದರೂ ಅದರ ಚಾಲಕ ಕಾರನ್ನು ನಿಲ್ಲಿಸಿದೆ ಸ್ಥಳದಿಂದ ಪರಾರಿಯಾಗಿ ಸುಮಾರು ಎರಡು ಕಿಮೀ ದೂರ ಚಲಿಸಿ ಹೆಜಮಾಡಿ ಚೆಕ್ ಪೋಸ್ಟ್ ಬಳಿಯ ಒಳ ರಸ್ತೆಯಲ್ಲಿ ಅಡಗಿ ಕುಳಿತಿದ್ದಾನೆ.
ಅಪಘಾತ ನಡೆದ ಕೂಡಲೇ ಪರಾರಿಯಾದ ಕಾರನ್ನು ಸ್ಥಳೀಯರು ಹಾಗೂ ಆಟೋ ಚಾಲಕರು ಬೆನ್ನಟ್ಟಿದ್ದು ಹೆಜಮಾಡಿ ಚೆಕ್ ಪೋಸ್ಟ್ ಬಳಿಯ ಒಳ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ಧಾವಿಸಿ ಕಾರಿನ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಮಂಗಳೂರು ಟ್ರಾಫಿಕ್ ಪೊಲೀಸ್ ಮುಖಾಂತರ ಕಾರ್ ಚಾಲಕ ಹಾಗೂ ಇತರ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…