ಮುಲ್ಕಿ: ಬಪ್ಪನಾಡು ಏಳಿಂಜೆ ಲೋಕೋಪಯೋಗಿ ರಸ್ತೆಯ ಪಳ್ಳಿಗುಡ್ಡೆ ಚಡಾವು ಜಂಕ್ಷನ್ ಬಳಿ ಕಾರಿಗೆ ಪಿಕಪ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶ ಪಾರಾಗಿದ್ದಾರೆ
ಮುಲ್ಕಿಯ ಕಾರ್ನಾಡ್ ನಿಂದ ವೆಂಕಟ್ರಮಣ ದೇವಸ್ಥಾನದ ಕಡೆಗೆ ಹೋಗುತ್ತಿದ್ದ ತಂಪು ಪಾನೀಯ ಲೈನ್ ಸೇಲ್ ಪಿಕಪ್ ಚಾಲಕನ ನಿರ್ಲಕ್ಷ ಚಾಲನೆಯಿಂದ ಪಡುಬಿದ್ರೆ ಸಮೀಪದ ಅಡ್ವೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರಿಗೆ ಪಳ್ಳಿಗುಡ್ಡೆ ಚಡಾವು ಜಂಕ್ಷನ್ ಬಳಿ ಡಿಕ್ಕಿ ಹೊಡೆದಿದೆ
ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗಕ್ಕೆ ಹಾನಿಯಾಗಿದ್ದು ಸ್ಥಳದಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಯಿತು.
ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…