ಗಾಳಿ – ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ.

ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ದಿ|ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತ ದುರ್ದೈವಿ. ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ದನವನ್ನು ಬಿಡಿಸಿ ತರಲು ಸಂಜೆ ತೆರಳಿದ್ದ ಸಮಯ ಗಾಳಿ-ಮಳೆಗೆ ತೋಟದಲ್ಲಿನ ಉಪ್ಪಳಿಗೆ ಮರವೊಂದು ಇವರ ಮೇಲೆ ಮುರಿದು ಬಿದ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮೀನಾಕ್ಷಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಕಡಬ ಕಂದಾಯ ನಿರೀಕ್ಷಕ ಪ್ರಥ್ವಿರಾಜ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.




