ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್’ಫಿಲೇ ಈದ್ ಕಾರ್ಯಕ್ರಮವು ಮೇ 17 ಶುಕ್ರವಾರ ಸಂಜೆ 05.30ಕ್ಕೆ ಮಾಣಿ ಜನಪ್ರಿಯ ಗಾರ್ಡನ್ಸ್ ನಲ್ಲಿ ನಡೆಯಲಿದೆ.
ಎನ್ನಾರೈ ಉದ್ಯಮಿ, ಸಂಘಟಕ ಝಕರಿಯಾ ಜೋಕಟ್ಟೆ ಅಲ್ ಮುಝೈನ್, ಶಿಕ್ಷಣ ಹರಿಕಾರ, ಸಾಂಸ್ಕೃತಿಕ ಸಂಘಟಕ ಡಾ. ಎಂ. ಮೋಹನ್ ಆಳ್ವ, ಮಂಗಳೂರು ಉದ್ಯಮಿ, ಸೇವಾಕರ್ತೃ ರೋಹನ್ ಮೊಂತೇರೋ ಅವರಿಗೆ ಈದ್ ಅವಾರ್ಡ್ ನೀಡಿ ಗೌರವಿಸಲಾಗುವುದು. ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಈದ್ ಸಂದೇಶ ನೀಡುವರು. ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ವಿಕ್ರಮ್ ದತ್ತ ಪ್ರಶಸ್ತಿ ವಿತರಿಸುವರು. ಸುಲ್ತಾನ್ ಗೋಲ್ಡ್ ಎಂ.ಡಿ. ಡಾ. ಅಬ್ದುಲ್ ರವೂಫ್, ಜನಪ್ರಿಯ ಗ್ರೂಪ್ಸ್ ಎಂ.ಡಿ. ಡಾ. ಅಬ್ದುಲ್ ಬಶೀರ್ ವಿ.ಕೆ., ಜಮೀಯ್ಯತುಲ್ ಫಲಾಹ್ ಜಿಲ್ಲಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹಾಗೂ ಡ್ರೀಮ್ ಎಸೋಸಿಯೇಟ್ಸ್ ಎಂ.ಡಿ. ಝುಬೈರ್ ಬುಳೇರಿಕಟ್ಟೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಇಬ್ರಾಹಿಂ ಬಾತಿಷ ತಂಡದ ಗಾಯನ, ಕೇರಳ ಕಣ್ಣೂರು ಕಲಾ ವೇದಿ ತಂಡದ ದಫ್, ಕೋಲ್ಕಳಿ, ಮುಟ್ಟ್, ಸೂಫಿ, ಅರಬಿಕ್ ನೃತ್ಯಗಳ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ ಮುಝೈನ್ ಜುಬೈಲ್, ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್, ಡ್ರೀಮ್ ಎಸೋಸಿಯೇಟ್ಸ್, ಜನಪ್ರಿಯ ಗಾರ್ಡನ್ಸ್, ರಿಫಾಯಿ ಟ್ರೇಡಿಂಗ್ ಕಂಪೆನಿ ಹಾಗೂ ಆನಿಯಾ ದರ್ಬಾರ್ ಗ್ರೂಪ್ ಆಫ್ ಹೋಟೆಲ್ಸ್ ಸಹಕಾರ ನೀಡಲಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…