ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ದೇರಳಕಟ್ಟೆಯ ಪರಿಸರದಲ್ಲಿ ಆ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಮೊಹಮ್ಮದ್ ಅಮೀನ್ ರಾಫಿ(23), ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಮೊಹಮ್ಮದ್ ನೌಮಾನ್(22), ಮತ್ತು ಮೊಹಮ್ಮದ್ ಸಫೀಲ್ ಎಂಬವರನ್ನು ವಶಕ್ಕೆ ಪಡೆದುಕೊಂಡು 6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/-. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ 2021 ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…