ಉಡುಪಿ: 1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್‌ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ ಗ್ಯಾಲರಿಯಲ್ಲಿ ಮೇ 17ರಿಂದ 19ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅದಿತಿ ಆರ್ಟ್ ಗ್ಯಾಲರಿಯ ಆಡಳಿತ ವಿಶ್ವಸ್ಥ ಡಾ. ಕಿರಣ್ ಆಚಾರ್ಯ ತಿಳಿಸಿದ್ದಾರೆ.
ಉಡುಪಿ ಕುಂಜಿಬೆಟ್ಟುವಿನ ಗ್ಯಾಲರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೂಲ ಪ್ರತಿಗಳನ್ನು ಬಹು ಪ್ರತಿಗಳನ್ನಾಗಿ ಮಾಡುವ ಸಂಪ್ರದಾಯ ಬದ್ಧ ಕಲೆಯೇ ಕಲ್ಲಚ್ಚು. ಇದೊಂದು ಪುರಾತನ ಮುದ್ರಣ ತಂತ್ರಗಾರಿಕೆ. ಕಲ್ಲಿನ ಮೇಲೆ ಚಿತ್ರಿಸಿ ಅದನ್ನು ರಾಸಾಯನಿಕ ಪ್ರಕ್ರಿಯೆಗೆ ಒಳಪಡಿಸಿ ಅದರ ಮೂಲಕ ಚಿತ್ರ ಪ್ರತಿಗಳನ್ನು ತೆಗೆಯುವ ಕಲೆ. ಪುರಾತನ ಕಲ್ಲಚ್ಚು ಕಲಾಕೃತಿಗಳ ಸಂರಕ್ಷಣೆ, ಅಧ್ಯಯನ ಮತ್ತು ಸಾಮಾಜಿಕ ಬದಲಾವಣೆಗಳ ದಾಖಲೀಕರಣ ಈ ಪ್ರದರ್ಶನದ ಉದ್ದೇಶವಾಗಿದೆ ಎಂದರು.
ಮೇ 17ರಂದು ಬೆಳಿಗ್ಗೆ 10.30ಕ್ಕೆ ಮುದ್ರಣ ಕ್ಷೇತ್ರದ ಉದ್ಯಮಿ ಮಂಗಳೂರಿನ ನೇಮಿರಾಜ್ ಶೆಟ್ಟಿ ಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾವಿದ ಡಾ.ಜನಾರ್ದನ ಹಾವಂಜೆ ಭಾಗವಹಿಸಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಕಲಾಕೃತಿಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ಯಾಲರಿಯ ವಿಶ್ವಸ್ಥರಾದ ಶ್ರೀನಿವಾಸ, ಪ್ರವೀಣಾ ಮೋಹನ್ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…