ನವದೆಹಲಿ : ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮಾಜಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ಗೆ ಕಾಂಗ್ರೆಸ್ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ.
ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕನ್ಹಯ್ಯಾ ಕುಮಾರ್ ಅವರನ್ನು ಎನ್‌ಎಸ್‌ಯುಐನ ಎಐಸಿಸಿ ಉಸ್ತುವಾರಿಯಾಗಿ ನೇಮಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (NSUI) ನೀರಜ್ ಕುಂದನ್ ಅವರ ನೇತೃತ್ವದಲ್ಲಿದೆ.
ಬಿಹಾರದ ಬೇಗುಸರಾಯ್ ಜಿಲ್ಲೆಯ ನಿವಾಸಿಯಾದ ಕನ್ಹಯ್ಯಾ ಕುಮಾರ್, ದೆಹಲಿ ಅಥವಾ ಬಿಹಾರ್ ರಾಜ್ಯದ ಉಸ್ತುವಾರಿಯಂತಹ ಕೆಲವು ಪ್ರಮುಖ ಹುದ್ದೆಯ ಜವಾಬ್ದಾರಿಯನ್ನು ಪಕ್ಷ ನೀಡಬಹುದು ಎಂಬ ಚರ್ಚೆಗಳು ನಡೆದಿದ್ದವು. ಆದರೆ, ಕನ್ಹಯ್ಯ ಅವರ ರಾಜಕೀಯ ಅನುಭವವನ್ನು ಪರಿಗಣಿಸಿ, ಪಕ್ಷದ ಉನ್ನತ ಮಟ್ಟದ ನಾಯಕರು ಎನ್‌ಎಸ್‌ಯುಐ ಉಸ್ತುವಾರಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಕನ್ಹಯ್ಯ ಅವರು ವಿದ್ಯಾರ್ಥಿಗಳೊಂದಿಗೆ ಕೆಲಸ ಮಾಡಿದ ಅನುಭವ ಹೊಂದಿದ ಕಾರಣದಿಂದ ಪಕ್ಷವು ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
‘ಕನ್ನಯ್ಯ ಕುಮಾರ್ ಮತ್ತೊಬ್ಬ ಸಿಧುವಿನಂತೆ ಕಾಂಗ್ರೆಸ್ ನಾಶ ಮಾಡಲಿದ್ದಾರೆ’
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯಲ್ಲಿ ಕನ್ಹಯ್ಯ ಕುಮಾರ್ ಭಾಗವಹಿಸಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಸಿದ್ದರು. ಮಾಜಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕರಾದ ಕುಮಾರ್, ಸೆಪ್ಟೆಂಬರ್ 2021ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ಜೆಎನ್‌ಯುನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಕನ್ಹಯ್ಯಾ ಅವರು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಅಧ್ಯಕ್ಷರಾಗಿದ್ದರು. ಜೊತೆಗೆ, ಲೋಕಸಭೆ ಚುನಾವಣೆಗೂ ಸಹ ಸ್ಪರ್ಧಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಸಕ್ರಿಯ ರಾಜಕಾರಣಕ್ಕೆ ಬಂದ ಕನ್ಹಯ್ಯಾ ಕುಮಾರ್, 2018ರಲ್ಲಿ ಸಿಪಿಐ ಸೇರಿದರು. 2019ರ ಚುನಾವಣೆಯಲ್ಲಿ ಬಿಹಾರದ ಬೇಗುಸರಾಯ್ ಲೋಕಸಭಾ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಟಿಕೆಟ್ ಪಡೆದು ಸ್ಪರ್ಧಿಸಿದ್ದರು. ಹಾಗೆಯೇ, ಫೆಬ್ರವರಿ 2016ರಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇಶವಿರೋಧಿ ಘೋಷಣೆಗಳನ್ನು ಕೂಗಿದ ಆರೋಪ ಇವರ ಮೇಲಿತ್ತು.
ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾವು (ಎನ್‌ಎಸ್‌ಯುಐ) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ವಿದ್ಯಾರ್ಥಿ ವಿಭಾಗ. 1971ರ ಏಪ್ರಿಲ್ 9ರಂದು ಸ್ಥಾಪಿಸಲಾಯಿತು. ಕೇರಳ ವಿದ್ಯಾರ್ಥಿ ಸಂಘ ಮತ್ತು ಪಶ್ಚಿಮ ಬಂಗಾಳ ರಾಜ್ಯ ಛತ್ರ ಪರಿಷತ್ ಎಂಬೆರಡು ಸಂಘಟನೆಗಳನ್ನು ವಿಲೀನಗೊಳಿಸಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಎನ್‌ಎಸ್‌ಯುಐ ರಚಿಸಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…