ಜನ ಮನದ ನಾಡಿ ಮಿಡಿತ

Advertisement

ಸರಣಿ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ಹುಣಸೂರು: ತಾಲೂಕಿನ ಅರಸು ಕಲ್ಲಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ, ಘಟನೆಯಲ್ಲಿ ಎರಡು ಬಸ್‌ಗಳು ಹಾಗೂ ಎರಡು ಕಾರುಗಳಿಗೆ ತೀವ್ರ ಜಖಂ ಆಗಿದೆ.

ಮೈಸೂರು-ಬಂಟ್ವಾಳ ಹೆದ್ದಾರಿ-275ರ ಅರಸು ಕಲ್ಲಹಳ್ಳಿ ಗೇಟ್ ಬಳಿಯಲ್ಲಿ ಘಟನೆ ನಡೆದಿದ್ದು, ಮೈಸೂರು ತಾಲೂಕಿನ ಹೂಟಗಳ್ಳಿಯ ಎಸ್‌ಆರ್‌ಎಸ್ ಕಾಲೋನಿಯ ಲೇ.ಬೈರಪ್ಪರ ಪುತ್ರ , ಕೂಲಿ ಕಾರ್ಮಿಕ ಕರಿಯಪ್ಪ(40) ಮೃತಪಟ್ಟಾತ, ಇವರಿಗೆ ಪತ್ನಿ, ಪುಟ್ಟ ಮಕ್ಕಳಿದ್ದಾರೆ.

ಕರಿಯಪ್ಪ ಹುಣಸೂರು ತಾಲೂಕಿನ ಅತ್ತಿಕುಪ್ಪೆಯಲ್ಲಿ ಬುಧವಾರ ನಡೆದ ಗ್ರಾಮದ ಹಬ್ಬದಲ್ಲಿ ಬಾಗವಹಿಸಿ ಸಂಜೆ 6.30ರ ವೇಳೆಗೆ ವಾಪಸ್ ಆಗುತ್ತಿದ್ದ ವೇಳೆ ಅರಸು ಕಲ್ಲಹಳ್ಳಿ ಬಳಿ ಹುಣಸೂರು ಡಿಪೋಗೆ ಸೇರಿದ ಬಸ್ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಿಂದ ಗಾಬರಿಗೊಂಡ ಬಸ್ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಇನ್ನೋವಾ ಕಾರು ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದರ ಹಿಂದೆ ಬರುತ್ತಿದ್ದ ಬೆಂಜ್ ಕಾರು ಇನ್ನೋವಾ ಕಾರಿಗೆ ಹಾಗೂ ಹಿಂದೆ ಬರುತ್ತಿದ್ದ ಮತ್ತೊಂದು ಸರಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎಲ್ಲಾ ವಾಹನಗಳಿಗೂ ಜಖಂಗೊಂಡಿದ್ದು. ಎಲ್ಲರೂ
ಸಣ್ಣಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!