ಹುಣಸೂರು: ತಾಲೂಕಿನ ಅರಸು ಕಲ್ಲಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ, ಘಟನೆಯಲ್ಲಿ ಎರಡು ಬಸ್‌ಗಳು ಹಾಗೂ ಎರಡು ಕಾರುಗಳಿಗೆ ತೀವ್ರ ಜಖಂ ಆಗಿದೆ.
ಮೈಸೂರು-ಬಂಟ್ವಾಳ ಹೆದ್ದಾರಿ-275ರ ಅರಸು ಕಲ್ಲಹಳ್ಳಿ ಗೇಟ್ ಬಳಿಯಲ್ಲಿ ಘಟನೆ ನಡೆದಿದ್ದು, ಮೈಸೂರು ತಾಲೂಕಿನ ಹೂಟಗಳ್ಳಿಯ ಎಸ್‌ಆರ್‌ಎಸ್ ಕಾಲೋನಿಯ ಲೇ.ಬೈರಪ್ಪರ ಪುತ್ರ , ಕೂಲಿ ಕಾರ್ಮಿಕ ಕರಿಯಪ್ಪ(40) ಮೃತಪಟ್ಟಾತ, ಇವರಿಗೆ ಪತ್ನಿ, ಪುಟ್ಟ ಮಕ್ಕಳಿದ್ದಾರೆ.
ಕರಿಯಪ್ಪ ಹುಣಸೂರು ತಾಲೂಕಿನ ಅತ್ತಿಕುಪ್ಪೆಯಲ್ಲಿ ಬುಧವಾರ ನಡೆದ ಗ್ರಾಮದ ಹಬ್ಬದಲ್ಲಿ ಬಾಗವಹಿಸಿ ಸಂಜೆ 6.30ರ ವೇಳೆಗೆ ವಾಪಸ್ ಆಗುತ್ತಿದ್ದ ವೇಳೆ ಅರಸು ಕಲ್ಲಹಳ್ಳಿ ಬಳಿ ಹುಣಸೂರು ಡಿಪೋಗೆ ಸೇರಿದ ಬಸ್ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಿಂದ ಗಾಬರಿಗೊಂಡ ಬಸ್ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಇನ್ನೋವಾ ಕಾರು ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದರ ಹಿಂದೆ ಬರುತ್ತಿದ್ದ ಬೆಂಜ್ ಕಾರು ಇನ್ನೋವಾ ಕಾರಿಗೆ ಹಾಗೂ ಹಿಂದೆ ಬರುತ್ತಿದ್ದ ಮತ್ತೊಂದು ಸರಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎಲ್ಲಾ ವಾಹನಗಳಿಗೂ ಜಖಂಗೊಂಡಿದ್ದು. ಎಲ್ಲರೂ
ಸಣ್ಣಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…