ಉಡುಪಿ: ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಲಾಯಿತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಆದರೆ ಅಷ್ಟೊತ್ತಿಗಾಗಲೇ ಹೊಟೇಲ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಕಳೆದ ಕೆಲವು ದಿನಗಳಿಂದ ಇದರ ಮಾಲೀಕರು ವ್ಯಾಪಾರ ಸ್ಥಗಿತಗೊಳಿಸಿದ್ದರು. ಹಾಗಾಗಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.



