ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಬಾಳೆ ಬೆಳೆದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ನಗರದ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿಯ ದೇವಿರಮ್ಮನಹಳ್ಳಿ ಗೇಟ್ ಬಳಿ ರಸ್ತೆ ತಡೆದು ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.



