ಮಂಗಳೂರು: 2024 ರ ಸಾಲಿನ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಬಡಗುತಿಟ್ಟಿನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಪಡೆಯಲಿದ್ದಾರೆ ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ “ಪಟ್ಲ ಸಂಭ್ರಮ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರೀಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರೂ ಆಗಿರುವ ಪಟ್ಲ ಸತೀಶ್ ಶೆಟ್ಟಿ ಮನವಿ ಮಾಡಿದ್ದಾರೆ.
ಪಟ್ಲ ಸಂಭ್ರಮ ಕಾರ್ಯಕ್ರಮದ ಕುರಿತು ಮಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಪಟ್ಲ ಸಂಭ್ರಮ” ಕಲಾವಿದರಿಗೆ ಕಲಾಪೋಷಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಎಲ್ಲರೂ ದುಡಿಯಬೇಕು. ಈಗಾಗಲೇ ಎಲ್ಲಾ ಘಟಕಗಳು ಆಮಂತ್ರಣ ಪತ್ರವನ್ನು ವಿತರಿಸುವ ಕೆಲಸ ಮಾಡಿವೆ ಎಂದರು.
2024 ರ ಸಾಲಿನ ಯಕ್ಷಧ್ರುವ ಪಟ್ಲ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಲನಚಿತ್ರ ನಟ ಕಿಚ್ಚ ಸುದೀಪ್ ಭಾಗವಹಿಸಲಿದ್ದಾರೆ ಎಂದವರು ವಿವರಿಸಿದರು.
ಸಮಾರಂಭದಲ್ಲಿ ಹಿರಿಯ ಅರ್ಥಧಾರಿ ಪ್ರಭಾಕರ ಜೋಷಿ ಭಾಗವಹಿಸಿ ಸಲಹೆ ಸೂಚನೆ ನೀಡಿದರು. ಭುಜಬಲಿ ಧರ್ಮಸ್ಥಳ, ಸರಪಾಡಿ ಅಶೋಕ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ರಂಗೋಲಿ, ಟಿ.ಬಿ. ರಾಜಾರಾಂ ಭಟ್, ಪೂರ್ಣಿಮಾ ಯತೀಶ್ ರೈ ಮೊದಲಾದವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮಗಳ ಸ್ವರೂಪವನ್ನು ವಿವರಿಸಿದರು.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ, ಉಪಾಧ್ಯಕ್ಷ ಮನು ರಾವ್, ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ, ರಾಜೀವ ಪೂಜಾರಿ ಕೈಕಂಬ, ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಪುರುಷೋತ್ತಮ ಭಂಡಾರಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ವಂದಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…