ಪೆನ್‌ಡ್ರೈವ್ ಕೇಸಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಹೊಳೆನರಸೀಪುರ ಕೇಸಲ್ಲಿ ಪಾಸ್‌ಪೋರ್ಟ್ ರದ್ದು ಮಾಡಲು ಕೋರ್ಟ್ ಅನುಮತಿ ನೀಡಿದೆ. ಅಲ್ಲದೆ, ಅರೆಸ್ಟ್ ವಾರೆಂಟ್‌ಗೆ ಎಸ್‌ಐಟಿಗೆ ಅನುಮತಿ ಪಡೆದಿದೆ.
ಎಸ್‌ಐಟಿಗೂ ಸಿಗದೇ ತಲೆಮರೆಸಿಕೊಂಡಿರುವ ಪ್ರಜ್ವಲ್ ವಿದೇಶದಲ್ಲೇ ವಾಸ್ತವ್ಯ ಹೂಡಿದ್ದಾರೆ. ಭೂಗತವಾಗೇ ಇದ್ದು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಹಾಗಾಗಿ ಏನೇ ಆಗಲಿ ಪ್ರಜ್ವಲ್‌ನನ್ನು ಬಂಧಿಸಲೇಬೇಕು ಎಂದು ಎಸ್‌ಐಟಿ ಪಣ ತೊಟ್ಟಿದೆ.ಅದರಂತೆ 42ನೇ ಎಸಿಎಂಎಂ ಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್ ಮಾಹಿತಿ ಕೇಳಿತ್ತು. ಈ ವೇಳೆ ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಎಸ್‌ಐಟಿ ಮಾಹಿತಿ ನೀಡಿದೆ. ಇದೀಗ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್‌ಐಟಿ ಲುಕ್‌ಔಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು. ಇದೀಗ ಅರೆಸ್ಟ್ ವಾರೆಂಟ್ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್ ಕಾರ್ನರ್ ನೋಟಿಸ್ ಬಳಿಕ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…