ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಗಳ ಅಂತರದಿಂದ ಆರ್ಸಿಬಿ ತಂಡವು ಗೆಲುವು ಸಾಧಿಸುವ ಮೂಲಕ ಈಗ ಪ್ಲೇ ಆಫ್ ಗೆ ಪ್ರವೇಶಿಸಿದೆ.

𝗥𝗼𝘆𝗮𝗹 𝗖𝗵𝗮𝗹𝗹𝗲𝗻𝗴𝗲𝗿𝘀 𝗕𝗲𝗻𝗴𝗮𝗹𝘂𝗿𝘂 seal the final spot for #TATAIPL 2024 Playoffs ❤️
— IndianPremierLeague (@IPL) May 18, 2024
What a turnaround 🫡
Scorecard ▶️ https://t.co/7RQR7B2jpC#RCBvCSK | @RCBTweets pic.twitter.com/yHS7xnEn8x
ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47, ದುಫ್ಲೆಸಿಸ್ 54, ರಜತ್ ಪತಿದಾರ್ 41, ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.

ಇನ್ನೊಂದೆಡೆಗೆ 219 ರನ್ ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಚೆನೈ ಸೂಪರ್ ಕಿಂಗ್ಸ್ ತಂಡವು ಆರಂಭದಲ್ಲಿಯೇ ತಂಡದ ಮೊತ್ತ 19 ರನ್ ಗಳಾಗುವಷ್ಟರಲ್ಲಿ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಆಘಾತವನ್ನು ಅನುಭವಿಸಿತು. ಈ ಸಂದರ್ಭದಲ್ಲಿ ನೆಲೆಯೂರಿದ ರವೀಂದ್ರ ರಚೀನ್ ಕೇವಲ 37 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದಾಗಿ 61 ರನ್ ಗಳಿಸಿದರೆ ಇನ್ನೊಂದೆಡೆಗೆ ರವೀಂದ್ರ ಜಡೇಜಾ ಕೇವಲ 22 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಮೂರು ಬೌಂಡರಿಗಳ ನೆರವಿನಿಂದ 44 ರನ್ ಗಳಿಸಿದರು. ಆದಾಗ್ಯೂ ಆರ್ಸಿಬಿ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಅಂತಿಮವಾಗಿ ಚೆನ್ನೈ ತಂಡವು 27 ರನ್ ಗಳ ಅಂತರಿಂದ ಸೋಲನ್ನು ಅನುಭವಿಸಬೇಕಾಗಿಯಿತು.



