ಜನ ಮನದ ನಾಡಿ ಮಿಡಿತ

Advertisement

IPL 2024: ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಆರ್ಸಿಬಿ..!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಗಳ ಅಂತರದಿಂದ ಆರ್ಸಿಬಿ ತಂಡವು ಗೆಲುವು ಸಾಧಿಸುವ ಮೂಲಕ ಈಗ ಪ್ಲೇ ಆಫ್ ಗೆ ಪ್ರವೇಶಿಸಿದೆ.

ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47, ದುಫ್ಲೆಸಿಸ್ 54, ರಜತ್ ಪತಿದಾರ್ 41, ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.

ಇನ್ನೊಂದೆಡೆಗೆ 219 ರನ್ ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಚೆನೈ ಸೂಪರ್ ಕಿಂಗ್ಸ್ ತಂಡವು ಆರಂಭದಲ್ಲಿಯೇ ತಂಡದ ಮೊತ್ತ 19 ರನ್ ಗಳಾಗುವಷ್ಟರಲ್ಲಿ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಆಘಾತವನ್ನು ಅನುಭವಿಸಿತು. ಈ ಸಂದರ್ಭದಲ್ಲಿ ನೆಲೆಯೂರಿದ ರವೀಂದ್ರ ರಚೀನ್ ಕೇವಲ 37 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದಾಗಿ 61 ರನ್ ಗಳಿಸಿದರೆ ಇನ್ನೊಂದೆಡೆಗೆ ರವೀಂದ್ರ ಜಡೇಜಾ ಕೇವಲ 22 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಮೂರು ಬೌಂಡರಿಗಳ ನೆರವಿನಿಂದ 44 ರನ್ ಗಳಿಸಿದರು. ಆದಾಗ್ಯೂ ಆರ್ಸಿಬಿ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಅಂತಿಮವಾಗಿ ಚೆನ್ನೈ ತಂಡವು 27 ರನ್ ಗಳ ಅಂತರಿಂದ ಸೋಲನ್ನು ಅನುಭವಿಸಬೇಕಾಗಿಯಿತು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!