ತ್ರಿಪುರ: ವಿಧಾನಸಭೆ ಕಲಾಪದಲ್ಲಿ ಇಂದು ಆಡಳಿತಾರೂಢ ಬಿಜೆಪಿ ಮತ್ತು ತಿಪ್ರಾ ಮೋಥಾ ಪಕ್ಷ ಸೇರಿ ಪ್ರತಿಪಕ್ಷದ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ಸದನದ ಬಾವಿಗೆ ಇಳಿದು ಗಲಭೆ ಉಂಟು ಮಾಡಿ ಶಾಸಕರು ಯುದ್ಧವನ್ನೇ ಸೃಷ್ಟಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಸ್ಪೀಕರ್ ಶಾಸಕರನ್ನು ಒಂದು ದಿನದ ಮಟ್ಟಿಗೆ ಕಲಾಪದಿಂದ ಅಮಾನತುಗೊಳಿಸಿದ್ದಾರೆ. ಇಂದು ಬೆಳಗ್ಗೆ ಕಲಾಪದಲ್ಲಿ ಪ್ರತಿಪಕ್ಷದ ನಾಯಕ ಅನಿಮೇಶ್ ದೆಬ್ಬರ್ಮಾ ಅವರು ಬಾಗ್ಬಾಶಾ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜದಾವ್ಲಾಲ್ ನಾಥ್ ಇತ್ತೀಚಿಗೆ ಸದನದಲ್ಲೇ ಅಶ್ಲೀಲ ಚಿತ್ರ ವೀಕ್ಷಣೆ ವಿಷಯದ ಬಗ್ಗೆ ಪ್ರಶ್ನೆಯನ್ನು ಎತ್ತಿದರು. ಆದರೆ, ಈ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸಿದ ಸ್ಪೀಕರ್, ಪ್ರಮುಖ ವಿಷಯಗಳ ಚರ್ಚೆ ನಂತರ ತಮ್ಮ ಬಳಿಗೆ ಹಿಂತಿರುಗಿ ಎಂದು ಸೂಚಿಸಿದರು. ಇದರಿಂದ ಪ್ರತಿಪಕ್ಷಗಳ ಶಾಸಕರು ಘೋಷಣೆಗಳನ್ನು ಕೂಗಲು ಆರಂಭಿಸಿದರು.
ಸ್ಪೀಕರ್ ಕುರ್ಚಿಯತ್ತ ಶಾಸಕರು ನುಗ್ಗಲು ಯತ್ನಿಸಿದರು. ಈ ವೇಳೆ, ವಿಧಾನಸಭೆಯ ಸಿಬ್ಬಂದಿ ಸ್ಪೀಕರ್ ಪೀಠದ ಬಳಿ ಭದ್ರತೆಯನ್ನು ಕಲ್ಪಿಸಿದರು. ಮಹಿಳಾ ಶಾಸಕರು ಸೇರಿ ಮೇಜುಗಳ ಮೇಲೆ ಹತ್ತಿ ಬೊಬ್ಬೆ ಹೊಡೆಯುತ್ತಾ ಸಂಧಿಗ್ಧ ವಾತಾವರಣ ಸೃಷ್ಟಿ ಮಾಡಿದರು. ಹೀಗಾಗಿ ಇಡೀ ಕಲಾಪವು ಗೊಂದಲದ ವಾತಾವರಣವಾಗಿ ಬದಲಾಯಿತು.
ಸದನದ ಶಾಸಕರ ವರ್ತನೆಯನ್ನು ಸ್ಪೀಕರ್ ಬಿಸ್ವಬಂಧ್ ಸೇನ್ ಖಂಡಿಸಿದರು. ಅಲ್ಲದೇ, ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ತಿಪ್ರಾ ಮೋಥಾ ಪಕ್ಷದ ಮೂವರು ಹಾಗೂ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಪಕ್ಷದ ತಲಾ ಇಬ್ಬರು ಸೇರಿ ಐವರು ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿದರು. ತಿಪ್ರಾ ಮೋಥಾ ಪಕ್ಷದ ಬ್ರಿಸ್ವಕೇತು ದೆಬ್ಬರ್ಮಾ, ನಂದಿತಾ ರಿಯಾಂಗ್ ಮತ್ತು ರಂಜಿತ್ ದೆಬ್ಬರ್ಮಾ ಹಾಗೂ ಸಿಪಿಐ(ಎಂ) ಶಾಸಕ ನಯನ್ ಸರ್ಕಾರ್, ಕಾಂಗ್ರೆಸ್‌ನ ಸುದೀಪ್ ರಾಯ್ ಬರ್ಮನ್ ಅವರನ್ನು ಸ್ಪೀಕರ್ ಒಂದು ದಿನದ ಮಟ್ಟಿಗೆ ಅಮಾನತು ಮಾಡಿದರು. ಆದರೆ, ಸ್ಪೀಕರ್ ಅವರ ನಿರ್ಧಾರ ವಿರೋಧಿಸಿದ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿ ಹೊರಟರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…