ಉಡುಪಿ: ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ.
ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು ಸ್ವಾಮಿ ದೈವದ ನೇಮೋತ್ಸವ ಏರ್ಪಡಿಸಲಾಗಿತ್ತು. ಇದ್ದಕ್ಕಿದ್ದಂತೆ ನಡುರಾತ್ರಿ ವ್ಯಾಪಕ ಮಳೆ ಆರಂಭವಾಯಿತು. ಸುರಿಯುವ ಮಳೆಯಲ್ಲೇ ದೈವ ನರ್ತಕ ರವಿ ಪಡ್ಡಮ್ ಅವರು ಗಗ್ಗರಸೇವೆ ನಡೆಸಿಕೊಟ್ಟರು. ಮಳೆಯಲ್ಲೇ ನಡೆಯುತ್ತಿರುವ ನೇಮೋತ್ಸವದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.
ದೈವರಾಧನೆಯ ಬಗ್ಗೆ ಕರಾವಳಿ ಜನರಲ್ಲಿ ಇರುವ ಶ್ರದ್ದೆ ಈ ಮೂಲಕ ವ್ಯಕ್ತವಾಗಿದೆ. ಆರಾಧನೆಯಲ್ಲಿ ಯಾವುದೇ ಲೋಪ ಬಾರದಂತೆ ದೈವರಾಧಕರು ಮತ್ತು ಜನರು ಈ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಅಂದ ಹಾಗೆ ತುಳುನಾಡಿನಲ್ಲಿ ಈ ವರ್ಷದಲ್ಲಿ ನಡೆಯುವ ಬಬ್ಬು ಸ್ವಾಮಿ ದೈವದ ಕೊನೆಯ ಕೋಲ ಇದು ಎಂದು ತಿಳಿದುಬಂದಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…