ಮಂಡ್ಯ: ತಡರಾತ್ರಿ ನಡೆದ ಕೌಟುಂಬಿಕ ಕಲಹವು ಸಾವಿನಲ್ಲಿ ಅಂತ್ಯ ಕಂಡ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹೊಸಯರ್ಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಗುವಿನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಪರಾರಿಯಾಗಿದ್ದಾನೆ. ಆರೋಪಿ ಪತಿ ಗೌತಮ್(34) ತನ್ನ ಪತ್ನಿ ವರ್ಷಿತ (24) ಅವರನ್ನು ಕೊಂದು ಪರಾರಿಯಾಗಿದ್ದಾನೆ. ಮಾರಣಾಂತಿಕ ಹಲ್ಲೆಗೊಳಗಾಗಿದ್ದ, ಚಿಂತಾಜನಕ ಸ್ಥಿತಿಯಲ್ಲಿದ್ದ 2 ವರ್ಷದ ಗಂಡು ಮಗುವಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಕೆಆರ್ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.



