ಜನ ಮನದ ನಾಡಿ ಮಿಡಿತ

Advertisement

ಕೌಟುಂಬಿಕ ಕಲಹ: ಪತಿಯಿಂದಲೇ ಪತ್ನಿಯ ಬರ್ಬರ ಕೊಲೆ, ಮಗುವಿನ ಮೇಲೂ ಮಾರಣಾಂತಿಕ ಹಲ್ಲೆ.

ಮಂಡ್ಯ: ತಡರಾತ್ರಿ ನಡೆದ ಕೌಟುಂಬಿಕ ಕಲಹವು ಸಾವಿನಲ್ಲಿ ಅಂತ್ಯ ಕಂಡ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹೊಸಯರ್ಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಗುವಿನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಪರಾರಿಯಾಗಿದ್ದಾನೆ. ಆರೋಪಿ ಪತಿ ಗೌತಮ್(34) ತನ್ನ ಪತ್ನಿ ವರ್ಷಿತ (24) ಅವರನ್ನು ಕೊಂದು ಪರಾರಿಯಾಗಿದ್ದಾನೆ. ಮಾರಣಾಂತಿಕ ಹಲ್ಲೆಗೊಳಗಾಗಿದ್ದ, ಚಿಂತಾಜನಕ ಸ್ಥಿತಿಯಲ್ಲಿದ್ದ 2 ವರ್ಷದ ಗಂಡು ಮಗುವಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಕೆಆರ್ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!