ಜನ ಮನದ ನಾಡಿ ಮಿಡಿತ

Advertisement

ಬಂಡಾಯದ ಹೊಡೆತ ಕಾಂಗ್ರೆಸ್ ಪಕ್ಷಕ್ಕೆ ಬೀಳಲ್ಲ: ಮಧು ಬಂಗಾರಪ್ಪ

ಉಡುಪಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಂಡಾಯವಾಗಿ ಸ್ಪರ್ಧಿಸಿರುವವರಿಂದ ಯಾವುದೇ ರೀತಿಯ ಹೊಡೆತ ಬೀಳಲ್ಲ. ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಸೇರಿದಂತೆ ಎಲ್ಲ ಆರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ನಮ್ಮ ಆರು ಅಭ್ಯರ್ಥಿಗಳು ಗೆಲ್ಲಬೇಕು ಎಂದು ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಅದರಂತೆ ನಮ್ಮ ಎಲ್ಲ ವರಿಷ್ಠರು, ನಾಯಕರು ಚುನಾವಣೆಯಲ್ಲಿ ತೊಡಗಿಸಿ ಕೊಂಡಿದ್ದಾರೆ ಎಂದರು.
ಬಂಡಾಯ ಎಂಬುದು ಎಲ್ಲ ಪಕ್ಷದಲ್ಲೂ ಇರುತ್ತದೆ. ಬಿಜೆಪಿಯಲ್ಲೂ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಇಂದು ವಿಶ್ವಾದ ಮೇಲೆಯೇ ಅಧಿಕಾರಕ್ಕೆ ಬಂದಿದೆ. ಎಲ್ಲ ಐದು ಗ್ಯಾರಂಟಿ ಗಳನ್ನು ಅನುಷ್ಠಾನ ಮಾಡಲಾಗಿದೆ. ಈ ಯೋಜನೆ ಲೋಕಸಭಾ ಹಾಗೂ ಈ ವಿಧಾನ ಪರಿಷತ್ ಚುನಾವಣೆಗೂ ಸಹಾಯ ಆಗುತ್ತದೆ ಎಂಬ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಮಮತಾ ಗಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಐವನ್ ಡಿಸೋಜ, ಹರೀಶ್ ಕಿಣಿ, ರಮೇಶ್ ಕಾಂಚನ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!