ಜನ ಮನದ ನಾಡಿ ಮಿಡಿತ

Advertisement

ಭವ್ಯ ಸ್ವಾಗತದೊಂದಿಗೆ ಕುಕ್ಕೆಗೆ ಆಗಮಿಸಿದ ನೂತನ ಬಂಡಿರಥ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಸೋಮವಾರ ಸಂಜೆ ಕುಕ್ಕೆಗೆ ಆಗಮಿಸಿತು.

ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು.
ಪುಷ್ಪಾರ್ಚನೆ:
ಸೋಮವಾರ ಸಂಜೆ ಕ್ಷೇತ್ರಕ್ಕಾಗಮಿಸಿದ ರಥವನ್ನು ಭಕ್ತಿಪೂರ್ವಕವಾಗಿ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಸ್ವಾಗತಿಸಲಾಯಿತು.ಆರಂಭದಲ್ಲಿ ಶ್ರೀ ಮಹಾಗಣಪತಿಗೆ ಪೂಜೆ ನೆರವೇರಿಸಿದ ಬಳಿಕ ಪುರೋಹಿತ ಪ್ರಸಾದ್ ಕಲ್ಲೂರಾಯ ನೂತನ ಬಂಡಿ ರಥಕ್ಕೆ ಪೂಜೆ ನೆರವೇರಿಸಿದರು.ಬಳಿಕ ಶ್ರೀ ದೇವಳದ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ನೂತನ ರಥಕ್ಕೆ ಪುಷ್ಪಾರ್ಚನೆ ಮಾಡಿದರು.ಬಳಿಕ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ,ಗ್ರಾ.ಪಂ.ಸದಸ್ಯ ಹರೀಶ್.ಎಸ್.ಇಂಜಾಡಿ, ಸೇವಾರ್ಥಿಗಳ ಆಪ್ತರಾದ ಮೋಹನದಾಸ ರೈ, ರಥ ನೀಡುವಲ್ಲಿ ಸಹಕರಿಸಿದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಬೆಂಗಳೂರು, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರುಗಳಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯೆ ವಿಮಲಾ ರಂಗಯ್ಯ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೃಷ್ಣಮೂರ್ತಿ ಭಟ್ ನೂತನ ರಥಕ್ಕೆ ಪುಷ್ಪಾರ್ಚನೆ ಮಾಡಿದರು.

ಶ್ರೀ ದೇವರ ಸೇವೆ ಪುಣ್ಯದ ಕಾರ್ಯ: ಎಸಿ ಜುಬಿನ್ ಮೊಹಪಾತ್ರ
ನಂತರ ಭಕ್ತಿ ಪೂರ್ವಕವಾದ ಭವ್ಯ ಮೆರವಣಿಗೆಗೆ ಶ್ರೀ ದೇವಳದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ದೇವರ ಸೇವೆ ಮಾಡುವುದು ಪುಣ್ಯದ ಕಾರ್ಯ.ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂಡಿ ರಥ ನೀಡುವಂತಹ ಸೇವೆಯನ್ನು ನೀಡಿದುದು ಶ್ರೀ ದೇವರ ಕೃಪಾಶೀರ್ವಾದಕ್ಕೆ ಬುನಾದಿಯಾಗುತ್ತದೆ.ಸೇವಾರ್ಥಿಗಳಿಗೆ ಮತ್ತು ಇದಕ್ಕೆ ಸಹಕರಿಸಿದ ಅವರ ಆಪ್ತರಿಗೂ ಕೃತಜ್ಞತೆಗಳು. ಇದೇ ರೀತಿ ಹೆಚ್ಚಿನ ಇನ್ನೂ ಹೆಚ್ಚಿನ ದಾನಿಗಳು ಶ್ರೀ ದೇವಳಕ್ಕೆ ಸೇವೆ ನೆರವೇರಿಸಲು ಮುಂದೆ ಬಂದರೆ ಸಂತಸಕರ.ಅಲ್ಲದೆ ಸುಬ್ರಹ್ಮಣ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ.ಇಲ್ಲಿ ಪ್ರಗತಿ ಕಾರ್ಯಗಳ ಅನುಷ್ಠಾನಕ್ಕೆ ಕೂಡಾ ದಾನಿಗಳು ಸಹಕರಿಸಿ ಕೊಡುಗೆ ನೀಡಲು ಮುಂದೆ ಬಂದರೆ ಹೆಚ್ಚು ಅನುಕೂಲಕರ ಎಂದರು.
ಶೀಘ್ರ ರಚನೆ ಶ್ಲಾಘನೀಯ:ಡಾ.ನಿಂಗಯ್ಯ
ಕ್ಷೇತ್ರದ ಬ್ರಹ್ಮರಥ ಸೇರಿದಂತೆ ಅನೇಕ ರಥಗಳನ್ನು ನಿರ್ಮಿಸಿದ ರಥಶಿಲ್ಪಿ ಕೋಟೇಶ್ವರದ ರಾಜಗೋಪಾಲ ಆಚಾರ್ಯ ರಥವನ್ನು ಶೀಘ್ರವಾಗಿ ನಿರ್ಮಿಸಿಕೊಟ್ಟಿದ್ದಾರೆ.ಕೇವಲ ಎರಡು ತಿಂಗಳಲ್ಲಿ ರಥ ನಿರ್ಮಿಸಿಕೊಟ್ಟ ಇವರ ಶ್ರಮವು ಅಭಿನಂದನೀಯ ಎಂದು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಹೇಳಿದರು.
ಭವ್ಯ ಮೆರವಣಿಗೆ:
ಬಳಿಕ ಕಾಶಿಕಟ್ಟೆಯಿಂದ ಭಕ್ತಿಪೂರ್ವಕವಾದ ಭವ್ಯ ಮೆರವಣಿಗೆ ಆರಂಭವಾಯಿತು.ಆನೆ ಬಿರುದಾವಳಿಗಳು, ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ಮೆರವಣಿಗೆಯಲ್ಲಿ ನೂತನ ರಥವನ್ನು ಶ್ರೀ ದೇವಳಕ್ಕೆ ಕೊಂಡೊಯ್ಯಲಾಯಿತು.ಶ್ರೀ ದೇವಳದ ಗೋಪುರದ ಬಳಿ ಕ್ಷೇತ್ರ ಪುರೋಹಿತ ವೇದಮೂರ್ತಿ ಮಧುಸೂದನ ಕಲ್ಲೂರಾಯರು ರಥಕ್ಕೆ ಪೂಜೆ ನೆರವೇರಿಸಿದರು.ಅಲ್ಲದೆ ತೆಂಗಿನ ಕಾಯಿ ಸಮರ್ಪಿಸಿದರು. ಮೆರವಣಿಗೆಯಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರುಗಳು, ಮಾಸ್ಟರ್ ಪ್ಲಾನ್ ಸಮಿತಿಯ ಮಾಜಿ ಸದಸ್ಯರುಗಳು, ಶ್ರೀ ದೇವಳದ ಸಿಬಂಧಿಗಳು, ಜನಪ್ರತಿನಿಧಿಗಳು, ಭಕ್ತಾಧಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!