ಮಂಜನಾಡಿ:ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಗ್ರಾ.ಪಂ ಆಡಳಿತ ಸಿ.ಸಿ ಟಿವಿ ಅಳವಡಿಸಿದ ದಿನದಂದೇ ಕೇರಳ ನೋಂದಾಯಿಸಲ್ಪಟ್ಟ ಕಾರಿನಲ್ಲಿ ತ್ಯಾಜ್ಯವನ್ನು ತಂದು ರಸ್ತೆಬದಿಯಲ್ಲೇ ಎಸೆದು ಹೋಗಿರುವ ಘಟನೆ ಮಂಜನಾಡಿ ಗ್ರಾಮದ ಬಟ್ಯಡ್ಕ ನಿವೇಶನದ ಬಳಿ ಸೆರೆಯಾಗಿದೆ. ಕರ್ನಾಟಕ- ಕೇರಳ ಸಂಪರ್ಕಿಸುವ ರಸ್ತೆ ಇದಾಗಿರುವುದರಿಂದ ಕೇರಳ ಭಾಗದಿಂದ ತ್ಯಾಜ್ಯ ತಂದು ಇಲ್ಲಿ ಎಸೆಯಲಾಗುತ್ತಿದೆಯೇ ಅನ್ನುವ ಅನುಮಾನ ವ್ಯಕ್ತವಾಗಿದೆ.
ಕೇರಳ ನೋಂದಾಯಿತ Kl 14AB3823 ಟಾಟಾ ಆಲ್ಟ್ರೋಝ್ ಕಾರಿನಲ್ಲಿ ತ್ಯಾಜ್ಯ ತಂದ ಆರೋಪಿ ಬಟ್ಯಡ್ಕ ನಿವೇಶನಗಳಿರುವ ಸಮೀಪ ಕಾರು ನಿಲ್ಲಿಸಿ ತ್ಯಾಜ್ಯ ಎಸೆದು ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ರಸ್ತೆಬದಿಯಲ್ಲಿ ತ್ಯಾಜ್ಯ ಎಸೆಯುವ ಪರಿಣಾಮ ಮಾಲಿನ್ಯ ಉಂಟಾಗಿ ಸ್ಥಳೀಯರು ಗ್ರಾ.ಪಂ.ಗೆ ವ್ಯಾಪಕವಾಗಿ ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ.19 ರಂದು ಸಿಸಿಟಿವಿಯನ್ನು ಗ್ರಾ.ಪಂ ಅಳವಡಿಸಿತ್ತು. ಅಂದೇ ತ್ಯಾಜ್ಯ ಎಸೆಯುವವರ ಕೃತ್ಯ ಬಯಲಾಗಿದೆ. ಈ ಕುರಿತು ಮಂಜನಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…