ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ಸಂಜೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಬಿಸಿರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ.
ಪಲ್ಟಿಯಾಗುವ ಸಂದರ್ಭದಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟ ಯುವಕ.
ರಸ್ತೆಗೆ ಎಸೆದ ರಭಸಕ್ಕೆ ಯುವಕನ ತಲೆಗೆ ಗಂಭೀರವಾದ ಗಾಯವಾಗಿತ್ತು.
ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಢಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…