ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮುಂಬೈ ಮತ್ತು ದುಬೈನಿಂದ ಆಗಮಿಸಿದ್ದ ವಿಮಾನಗಳು ಇಂದು ಬೆಳಗ್ಗೆ ತಡವಾಗಿ ಲ್ಯಾಂಡ್ ಆಗಿದೆ.
ಹಾಗೆಯೇ, ಹೈದರಾಬಾದ್‌ನಿಂದ ಬಂದ ವಿಮಾನವು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೆ ಗೋವಾಗೆ ಪ್ರಯಾಣಿಸಿ ಮತ್ತೆ ತಿರುಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲಾಂಡ್ ಆಯಿತು. ದಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ವರುಣನ ಆರ್ಭಟ: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತಿದ್ದು ಕಳೆದ ಸೋಮವಾರದಿಂದ ಎಡಬಿಡದೆ ಸುರಿಯುತ್ತಿದೆ. ಶುಕ್ರವಾರದಂದು ಮಳೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದು, ಇಂದು ಮುಂಜಾನೆಯಿಂದ ಮತ್ತೆ ಆರಂಭವಾಗಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಕಡೆ ಹಾನಿ ಸಂಭವಿಸಿದೆ. ಮಳೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ನೀರುಪಾಲಾಗಿದ್ದಾನೆ ಹಾಗೂ ನೂರಾರು ಮನೆಗಳು ಜಲಾವೃತಗೊಂಡಿವೆ



