ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಇಬ್ಬರ ಬಂಧನ, ಹೊಡೆದಾಟದ ವಿಡಿಯೋ ವೈರಲ್

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ (169ಎ) ಯ ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ನಡೆದಿದೆ. ಮೇ 18ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.
ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!