ಕರಾವಳಿ

ಪಟ್ಲ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳ ಅನನ್ಯ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ!

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಹೇರಂಭ ಕಮಿಕಲ್ಸ್ ಇಂಡಸ್ಟ್ರಿಸ್ ಮುಂಬೈ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರು, ಯಕ್ಷಗಾನ ನಮ್ಮ ತುಳುನಾಡಿನ ಅನನ್ಯ ಪರಂಪರೆ, ಯಕ್ಷಗಾನ ಕಲಾವಿದರಿಗೆ ನೆರವಾಗುವ ದೃಷ್ಟಿಯಲ್ಲಿ ದಾನಿಗಳನ್ನು ಒಗ್ಗೂಡಿಸಿಕೊಂಡು ಪಟ್ಲ ಸತೀಶ್ ಶೆಟ್ಟಿಯವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಅನ್ನು ಸ್ಥಾಪಿಸಿದರು ಎಂದರು.

ಪ್ರತೀ ವರ್ಷ ನಾವು ಯಕ್ಷಗಾನ ಕಲಾವಿದರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ಮುಂದೆಯೂ ಇನ್ನಷ್ಟು ದಾನಿಗಳ ನೆರವು ಸಂಘಟನೆಗೆ ಬೇಕಿದೆ. ಎಲ್ಲರೂ ಜೊತೆಗೂಡಿ ನಡೆದಲ್ಲಿ ಸಂಘಟನೆಯ ಶ್ರಮ ಸಾರ್ಥಕವಾಗಲಿದೆ ಎಂದರು. ಆಶೀರ್ವಚನಗೈದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು, ಒಂಬತ್ತನೇ ವರ್ಷದ ಸಂಭ್ರಮದಲ್ಲಿರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಆಶಕ್ತ ಕಲಾವಿದರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. 40 ಬೇರೆ ಬೇರೆ ಊರುಗಳಲ್ಲಿ ಸಂಘಟನೆ ವಿಸ್ತರಿಸಲ್ಪಟ್ಟಿದ್ದು ಪಟ್ಟ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸಾರ್ಥಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದು ಯಕ್ಷ ಕಲಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ’ ಎಂದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ‘ಪಟ್ಲ ಫೌಂಡೇಶನ್ ಟ್ರಸ್ಟ್ ದೇವಸ್ಥಾನವಿದ್ದಂತೆ, ದಾನಿಗಳು ಇಲ್ಲಿ ದೇವರಿದ್ದಂತೆ. ಕಷ್ಟದಲ್ಲಿ ಬರುವ ಕಲಾವಿದರಿಗೆ ಪಟ್ಲ ಸತೀಶ್ ಶೆಟ್ಟಿ ಅವರು ಬೆನ್ನುತಟ್ಟಿ ಪ್ರೋತ್ಸಾಹ ನೀಡುತ್ತಿದ್ದಾರೆ. ಜನರಿಗೆ ನೆರವಾಗುವಾಗ ಆರೋಪ ಮಾಡುವವರು ಇದ್ದೇ ಇರುತ್ತಾರೆ. ನಾವು ಯಾವುದೇ ಕಾರಣಕ್ಕೂ ನಿಲ್ಲಬಾರದು. ಯಾರೇನೇ ಹೇಳಿದರೂ ನಮ್ಮ ಗುರಿ ಸ್ಪಷ್ಟವಾಗಿದ್ದು ಮುಂದುವರಿಯಬೇಕು” ಎಂದರು.

ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕ ವೆಂಕಟ್ರಮಣ ಅಸ್ರಣ್ಣರು ಮಾತನಾಡಿ, “ಪಟ್ಟರು ಪರೋಪಕಾರಕ್ಕಾಗಿ ಸಂಘಟನೆಯನ್ನು ಸ್ಥಾಪಿಸಿದರು. ಈ ಮೂಲಕ ಬಹಳಷ್ಟು ಕಲಾವಿದರಿಗೆ ನಾನಾ ರೀತಿಯಲ್ಲಿ ನೆರವಾಗಿದ್ದಾರೆ. ಇನ್ನು ಮುಂದೆಯೂ ಇವರ ಸಂಘಟನೆ ರಾಜ್ಯದಲ್ಲೆಡೆ ವಿಸ್ತರಣೆಯಾಗಲಿ. ಪಟ್ಲರ ಕೀರ್ತಿ ಎಲ್ಲೆಡೆ ಹರಡಲಿ” ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ 2024ರ ಯಕ್ಷಧ್ರುವ ಕಲಾಗೌರವ ಸಮರ್ಪಿಸಲಾಯಿತು. ವೈದಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಯಾಜಿ ನಿರಂಜನ್ ಭಟ್, ಮಾಧ್ಯಮ ಕ್ಷೇತ್ರದಲ್ಲಿ ಚಿದಂಬರ ಬೈಕಂಪಾಡಿ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಲೆ.ಕ. ವಿನ್ಸೆಂಟ್ ಡಿಸೋಜ, ಕಮಾಂಡರ್ ಶಾಮ್ ರಾಜ್, ಕಲಾ ಸಂಘಟನೆಗಾಗಿ ಯಕ್ಷಗಾನ ಅಭ್ಯಾಸ ತರಬೇತಿ ದುಬೈ, ಶಾಸ್ತ್ರೀಯ ಸಂಗೀತಕ್ಕಾಗಿ ಕುದುಮಾರು ಎಸ್. ವೆಂಕಟರಾವ್, ಸಾಹಿತ್ಯ ಕ್ಷೇತ್ರದ ಸಾಧನಗಾಗಿ ಡಾ. ರಮಾನಂದ ಬನಾರಿ, ಹರಿಕಥೆ ಜಗದೀಶ್ ದಾಸ್ ಪೊಳಲಿ, ರಂಗಭೂಮಿ ಸಾಧನೆಗಾಗಿ ಲಕ್ಷ್ಮಣ ಕುಮಾರ್ ಮಲ್ಲೂರು, ಭರತನಾಟ್ಯ ಕಮಲಾಕ್ಷ, ಅಚಾರ್‌ ಬೆಳ್ತಂಗಡಿ, ಕಂಬಳ ಕ್ಷೇತ್ರದಲ್ಲಿ ಅಶೋಕ್ ಶೆಟ್ಟಿ ಬೇಲಾಡಿ, ಯಕ್ಷಗಾನ ಚಿದಂಬರ ಬಾಬು ಪೂಜಾರಿ, ಯಕ್ಷಗಾನ(ಬಡಗು) ನಿರ್ಜೆಡ್ಡು ಚಂದ್ರ ಕುಲಾಲ್, ಯಕ್ಷಗುರು ಮಹಾವೀರ ಪಾಂಡಿ, ಹವ್ಯಾಸಿ ಜಗನ್ನಾಥ ಶೆಟ್ಟಿ ನಚ್ಚರಿಪೇಟೆ, ಮಹಿಳಾ ಪೂರ್ಣಿಮಾ ಯತೀಶ್ ರೈ, ದೈವಾರಾಧನೆ ಕ್ಷೇತ್ರದಲ್ಲಿ ಕೊರಗ ಪಾಣಾರ, ಭಜನ ಭೋಜ ಸುವರ್ಣ ಕುಲಶೇಖರ ಅವರನ್ನು ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಆರೋಗ್ಯ ಶಿಬಿರವನ್ನು ಕಿಟ್ ನೀಡುವ ಮೂಲಕ ಉದ್ಘಾಟಿಸಿದ ಡಾ.ರವೀಶ್ ತುಂಗಾ ಅವರು, ಪಟ್ಲ ಸಂಭ್ರಮ ತುಳುನಾಡಿನ ಉತ್ಸವವಾಗಿದೆ. ಕಲಾವಿದರಿಗೆ ಆರೋಗ್ಯ ಶಿಬಿರದ ಜೊತೆಗೆ ವಿಮೆ ಸೌಲಭ್ಯ ಕಲ್ಪಿಸಿರುವುದು ದೇವರು ಮೆಚ್ಚುವ ಕೆಲಸ ಎಂದರು. ರಕ್ತದಾನ ಶಿಬಿರದ ಉದ್ಘಾಟನೆಯನ್ನು ಡಾ. ಶ್ರೀಧರ್ ಶೆಟ್ಟಿ ನೆರವೇರಿಸಿದರು. ಬಳಿಕ ಮಾತಾಡಿದ ಅವರು, ‘ರಕ್ತದಾನ ಅತ್ಯಂತ ಪ್ರಮುಖವಾದ ದಾನವಾಗಿದೆ. 18ರಿಂದ 60 ವರ್ಷದೊಳಗಿನ ಯಾರು ಬೇಕಾದರೂ ರಕ್ತವನ್ನು ದಾನ ಮಾಡಬಹುದು. ರಕ್ತದಾನ ಕುರಿತು ಮೂಢನಂಬಿಕೆ ಬೆಳಸಿಕೊಳ್ಳಬಾರದು ಎಂದರು.

ವೇದಿಕಯಲ್ಲಿ ಬಡಾಜೆ ರವಿಶಂಕರ್ ಶೆಟ್ಟಿ, ಪಾವಂಜೆ ಕ್ಷೇತ್ರದ ಆಡಳಿತ ಮಂಡಳಿ ಮೊತ್ತೇಸರ ಶಶೀಂದ್ರ ಕುಮಾರ್, ಡಾ.ಪದ್ಮನಾಭ ಕಾಮತ್, ಬಿಬಿಎಂಪಿ ಜಂಟಿ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉದ್ಯಮಿ ರಘುನಾಥ್ ಸೋಮಯಾಜಿ, ನಿಟ್ಟೆ ಯೂನಿವರ್ಸಿಟಿಯ ಪ್ರೊ. ಡಾ.ಬಿ.ಸತೀಶ್ ಕುಮಾರ್ ಭಂಡಾರಿ, ಹಿರಿಯ ನ್ಯಾಯವಾದಿ ಭೋಜಿ ನಾರಾಯಣ ಪೂಜಾರಿ, ಡಾ.ರವೀಶ್ ತುಂಗಾ, ಡಾ.ಶ್ರೀಧರ್ ಶೆಟ್ಟಿ, ಭುವನೇಶ್ ಪಚ್ಚಿನಡ್ಕ, ಪಟ್ಲಗುತ್ತು ಮಹಾಬಲ ಶೆಟ್ಟಿ, ಅಶೋಕ್‌ ಶೆಟ್ಟಿ ಬೆಳ್ಳಾಡಿ, ಜಯರಾಮ್‌ ಶೇಖ, ಕರುಣಾಕರ ರೈ ದೇರ್ಲ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಬಾಲಕೃಷ್ಣ ಹೆಗ್ಡೆ, ಭುಜಬಲಿ ಧರ್ಮಸ್ಥಳ, ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ್ ಎಸ್. ಪೂಂಜಾ, ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಕಾಶ್ ರಾವ್, ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ಕೋ ಶಾಧಿಕಾರಿ CA ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ, ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಅಶೋಕ್ ಆರ್ ಶೆಟ್ಟಿ ಪೆರ್ಮುದೆ, ಡಾ ಮನುರಾವ್‌, ದುರ್ಗಾಪ್ರಸಾದ್ ಪಿವಿ ಪಡುಬಿದ್ರೆ, ಜೊತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ರವಿಚಂದ್ರ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು. ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ರವಿ ಶೆಟ್ಟಿ ವಂದಿಸಿದರು. ಕದ್ರಿ ನವನೀತ ಶೆಟ್ಟಿ, ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago