ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ನೂತನವಾಗಿ ನಿರ್ಮಾಣಗೊಂಡು ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹರೇಕಳ-ಅಡ್ಯಾರ್ ಅಣೆಕಟ್ಟು ಸೇತುವೆಯಲ್ಲಿ ಸಂಭವಿಸಿದ ಮೊದಲ ಅಪಘಾತ ಇದಾಗಿದೆ.



ಪುತ್ತೂರು ಕಡೆಯಿಂದ ಅಡ್ಯಾರ್ ನತ್ತ ಬರುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಆಲ್ಟೋ ಕಾರು ಹಾಗೂ ಎದುರಿನಿಂದ ಬಂದ ಇಕೋ ಸ್ಪೋಟ್ಸ್ 9 ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ, ಸಹಪ್ರಯಾಣಿಕರು ಹಾಗೂ ಇನ್ನೊಂದು ಕಾರಿನಲ್ಲಿದ್ದ ಚಾಲಕ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡ್ಯಾಂ ನಿಂದಾಗಿ ಸ್ಥಳೀಯರ ಜಾಗ ಮುಳುಗಡೆಯಾಗುವ ಭೀತಿಯಿದ್ದರೂ, ಸಂಬಂಧಪಟ್ಟ ಇಲಾಖೆ ಜಾಗಗಳನ್ನು ಸ್ವಾಧೀನ ಮಾಡದೇ ಇರುವುದರಿಂದ , ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ಹಾಗಾಗಿ ಸೇತುವೆ ನಿರ್ಮಾಣಗೊಂಡು ವರ್ಷ ಕಳೆದರೂ ಅಧಿಕೃತ ಉದ್ಘಾಟನೆ ಇಂದಿಗೂ ಆಗಿಲ್ಲ.





