ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸ್ವರ್ಣ ನದಿಯ ಸೇತುವೆ ದಂಡೆಗೆ ಡಿಕ್ಕಿ ಹೊಡೆದ ಬಸ್: ದೊಡ್ಡ ದುರಂತದಿಂದ ಪ್ರಯಾಣಿಕರು ಪಾರು

ಉಡುಪಿ: ಖಾಸಗಿ ಬನ್ನೊಂದು ಸೇತುವೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಯಾಣಪುರ ಸೇತುವೆಯಲ್ಲಿ ಸಂಭವಿಸಿದೆ. ಬಸ್ ನದಿಯಲ್ಲಿ ಮುಳುಗುವ ಅಪಾಯವಿದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಬಹಳ ದೊಡ್ಡ ದುರಂತದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ ಸ್ವರ್ಣ ನದಿಯ ಕಲ್ಯಾಣಪುರ ಸೇತುವೆಯ ಗರ್ಡ‌ರ್ ರಭಸದಿಂದ ಗುದ್ದಿದೆ. ಇದರ ಪರಿಣಾಮ ಸುರಕ್ಷಾ ಗರ್ಡರ್ ಮುರಿದಿದ್ದು, ಬಸ್ ಅಂಚಿನಲ್ಲಿ ನಿಂತಿದೆ. ಪ್ರಯಾಣಿಕರು ನದಿಗೆ ಬಿದ್ದು ಮುಳುಗಡೆ ಆಗುವ ಸನ್ನಿವೇಶದ ಅಪಾಯದಿಂದ ಪಾರಾಗಿದ್ದಾರೆ.
ಅದೇ ಸಮಯ ಸೇತುವೆ ಕೆಳಗಡೆ ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಶಂಕರ ಎಂಬವರ ಮೇಲೆ ಸಿಮೆಂಟು ಕಂಬದ ತುಂಡು ಮುರಿದು ಬಿದ್ದಿದೆ. ಅವರ ಕೈಗೆ ಗಾಯವಾಗಿದ್ದು ಚಿಕಿತ್ಸೆ ಪಡೆದಿದ್ದಾರೆ. ಕಲ್ಯಾಣಪುರ ಸೇತುವೆ 1963ರಲ್ಲಿ ನಿರ್ಮಾಣವಾಗಿದ್ದು 6 ದಶಕಗಳಷ್ಟು ಹಳೆಯದಾಗಿದ್ದು ಇಲ್ಲಿ ಬಹಳಷ್ಟು ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿವೆ.
ಸೇತುವೆಯ ಅಡಿಯಲ್ಲಿ ಅಲ್ಲಲ್ಲಿ ಕಾಂಕ್ರೀಟ್ ಬಿರುಕು ಬಿಟ್ಟಿದೆ. ಸೇತುವೆಯನ್ನು ಅಡಿ ಭಾಗದಲ್ಲೂ ದುರಸ್ಥಿ ಮಾಡಬೇಕಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!