ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನೆ ಹಾಗೂ ಅಭಿನಂದನಾ ಕಾರ್ಯಕ್ರಮವು ಕಡಬ ಯೋಜನಾಕಛೇರಿ ಸಭಾಂಗಣದಲ್ಲಿ ನಡೆಯಿತು..
ಕಾರ್ಯಕ್ರಮವನ್ನು ಉಧ್ಘಾಟಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ಕಛೇರಿಯ ಉಡುಪಿ ಪ್ರಾದೇಶೀಕ ನಿರ್ಧೇಶಕರು ದುಗ್ಗೇಗೌಡರವರು ಮಾತನಾಡಿ. ಪೂಜ್ಶ ವೀರೇಂದ್ರ ಹೆಗ್ಗಡೆಯವರ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಅನುಷ್ಟಾನಗೊಳಿಸುವಲ್ಲಿ ಯೋಜನೆಯ ಕಾರ್ಯಕರ್ತರುಗಳು ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜೇನು ನೋಣದಂತೆ ಪ್ರತೀ ಕುಟುಂಬದ ಸದಸ್ಶರೊಂದಿಗೆ ಅವಿನಾಭಾವ ಸಂಭಂಧಗಳನ್ನು ಹೆಚ್ಚುಗೊಳಿಸಿ ದುರ್ಬಳರನ್ನು ಸಭಲರನ್ನಾಗಿಸಲು ಕೆಲಸ ನಿರ್ವಹಿಸಬೇಕು..ಸಾಧನೆಗೆ ಅಡೆತಡೆಗಳು ಬರುವುದು ಸಹಜ ಅದನ್ನು ಮುಂದಿನ ಸಾಧನೆಗೆ ದಾರಿ ದೀಪವಾಗಿಸಿಕೊಂಡಲ್ಲಿ ಸಾಧನೆಯೋಂದಿಗೆ ತಮ್ಮ ಹೆಸರು ಶಾಸ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುತ್ತದೆ ಎಂದರು.
ತಾಲೂಕಿನಲ್ಲಿ 2023-24ನೇ ಸಾಲಿನ ಕಿೃಯಾಯೋಜನೆಯಲ್ಲಿ ಸಾಧನೆ ಮಾಡಿದ ಕಾರ್ಯಕರ್ತರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ತಾಲೂಕಿನ ಆರು ವಲಯಗಳಲ್ಲಿ ಪ್ರಥಮ ಸ್ಥಾನವನ್ನು ನೆಲ್ಶಾಡಿ ವಲಯದ ಮೇಲ್ವೀಚಾರಕ ವಿಜೇಶ್ ಜೈನ್ ಹಾಗೂ ವಲಯದ ಸೇವಾಪ್ರತಿನಿಧಿಗಳು ಹಾಗೂ ದ್ವೀತೀಯ ಸ್ಥಾನವನ್ನು ಕಡಬ ವಲಯದ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಹಾಗೂ ಸೇವಾಪ್ರತಿನಿಧಿಗಳು ಪಡೆದುಕೊಂಡರು.
ತಾಲೂಕಿನ ಸೇವಾಪ್ರತಿನಿಧಿಗಳಲ್ಲಿ ಪ್ರಥಮ ಸ್ಥಾನವನ್ನು ಗೊಳಿತೊಟ್ಟು ವಲಯದ ಸೇವಾಪ್ರತಿನಿಧಿ ಜಯಶ್ರೀ ಹಾಗೂ ದ್ವೀತೀಯ ಸ್ಥಾನವನ್ನು ಕಡಬ ವಲಯದ ಸೇವಾಪ್ರತಿನಿಧಿ ಜಯಲಕ್ಷ್ಮೀಯವರು ಪಡೆದುಕೊಂಡರು..
ಶೌರ್ಯಘಟಕದ ನಿರ್ವಹಣೆಯಲ್ಲಿ ಪ್ರಥಮ ಸ್ಥಾನವನ್ನು ಕಡಬ ವಲಯದ ಸಂಯೋಜಕಿ ನಳಿನಿ ಹಾಗೂ ದ್ವೀತೀಯ ಸ್ಥಾನವನ್ನು ಆಲಂಕಾರು ವಲಯದ ಸಂಯೋಜಕಿ ಸವಿತಾ ರವರು ಪಡೆದುಕೊಂಡರು.
ಜಿಲ್ಲಾ ನಿರ್ಧೇಶಕರಾದ ಪ್ರವೀಣ್ ಕುಮಾರ್ ರವರು ಸಾಧನೆ ಮಾಡಿದ ತಾಲೂಕಿನ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸಿದರು.
ಭಾರತೀಯ ವಿಮಾ ವಿಭಾಗದ ಜನರಲ್ ಮ್ಶಾನೇಜರ್ ದಿನೇಶ್ ಪ್ರಭುರವರು ವಿಮಾ ಪಾಲಿಸಿ ನೊಂದಾವಣೆಯಲ್ಲಿ ಸಾಧನೆ ಮಾಡಿದವರನ್ನು ಸ್ಮರಣಿಕೆ ನೀಡಿ ಅಭಿನಂದಿಸಿದರು.
ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸ್ವಾಗತಿಸಿ ಧನ್ಶವಾದ ನೀಡಿದರು.
ತಾಲೂಕು ಹಣಕಾಸು ಪ್ರಭಂದಕಿ ಸುಜಾತ ಹಾಗೂ ಆಡಳಿತ ಪ್ರಭಂದಕಿ ಚೈತ್ರ ಕಾರ್ಯಕ್ರಮ ಸಂಯೋಜಿಸಿದರು. ತಾಲೂಕಿನ ಮೇಲ್ವೀಚಾರಕ ಶ್ರೇಣಿ ಸಿಬ್ಬಂದಿಗಳು ಕಛೇರಿ ಸಿಬ್ಬಂದಿಗಳು ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಡಬ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರ್ವಹಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…