ಇತರೆ

ಮುಲ್ಕಿ: ಆಕ್ಯುಪ್ರೆಷರ್ ಮತ್ತು ಸುಜೋಕ್ ಮ್ಯಾಗ್ನೆಟ್, ವೈಬ್ರೇಶನ್ ತೆರಪಿ ಚಿಕಿತ್ಸಾ ಶಿಬಿರದ ಸಮಾರೋಪ ಸಮಾರಂಭ

ಮುಲ್ಕಿ: ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ,
ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಇದರ ಜಂಟಿ ಆಶ್ರಯದಲ್ಲಿ ಆಕ್ಯುಪ್ರೆಷರ್ ಮತ್ತು ಸುಜೋಕ್ ಮ್ಯಾಗ್ನೆಟ್, ವೈಬ್ರೇಶನ್ ತೆರಪಿ ಚಿಕಿತ್ಸಾ ಶಿಬಿರದ ಸಮಾರೋಪ ಸಮಾರಂಭವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ//.ರಾಮ್ ಮನೋಹರ್ ಲೋಹಿಯಾ ಆರೋಗ್ಯ ಜೀವನ ಸಂಸ್ಥಾನ ಹನುಮಾನ್ ಗಡ ರಾಜಸ್ಥಾನ ಇದರ ಅಕ್ಯೂಪ್ರೆಷರ್ ಥೆರಪಿಸ್ಟ್
ರೂಪಾರಾಮ್, ಪ್ರಹ್ಲಾದ್ ಮತ್ತು ಲೂನಾರಾಮ್, ಪಡುಪಣಂಬೂರುಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮಾ ಚಂದ್ರಶೇಖರ್, ನೆಹರು ಯುವ ಕೇಂದ್ರ ಮಂಗಳೂರು ಇಲ್ಲಿನ ಆಡಳಿತಾಧಿಕಾರಿ ಶ್ರೀ ಜಗದೀಶ್ ಎನ್, ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಸದಾಶಿವ ಕುಂದರ್, ವಿಶ್ವ ಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಗಣೇಶ್ ಜಿ ಬಂಗೇರ, ನಿಕಟ ಪೂರ್ವ ಅಧ್ಯಕ್ಷರಾದ ದಿನಕರ್ ಸಾಲ್ಯಾನ್, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ನಿಕಟ ಪೂರ್ವ ಅಧ್ಯಕ್ಷರಾದ ಸುರೇಶ್ ಬಿ ದೇವಾಡಿಗ ಫೇಮಸ್ ಯೂತ್ ಕ್ಲಬ್ ನ ಗೌರವಾಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು ಮತ್ತು ಮಹಿಳಾ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಥೆರಪಿಸ್ಟ್ ಗಳಾದ ಶ್ರೀ ರೂಪಾರಾಮ್, ಶ್ರೀ ಪ್ರಹ್ಲಾದ್ ಮತ್ತು ಶ್ರೀ ಲೂನಾರಾಮ್ ರವರ ಉತ್ತಮ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಶಿಬಿರಾರ್ಥಿಗಳಾದ ಶ್ರೀ ಚಂದ್ರಶೇಖರ್, ದಿನಕರ್ ಸಾಲ್ಯಾನ್, ಮತ್ತು ಶ್ರೀಮತಿ ರತ್ನ ತಮ್ಮ ಶಿಬಿರದ ಅನುಭವವನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ್ ಅಮೀನ್ ರವರು ಪ್ರಾಸ್ತಾನವಿಕ ಮಾತಿನೊಂದಿಗೆ ಸ್ವಾಗತವನ್ನು ನೆರವೇರಿಸಿ ಕೊಟ್ಟರು,ಹಿಮಕರ್ ಕೋಟ್ಯಾನ್ ರವರು ಧನ್ಯವಾದವನ್ನು ಅರ್ಪಿಸಿ, ಮಹಮ್ಮದ್ ಶರೀಫ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

6 hours ago

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…

6 hours ago

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…

9 hours ago

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…

9 hours ago

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

 ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…

1 day ago

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…

1 day ago