ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅನಾಹುತ: ಭೂಕುಸಿತಕ್ಕೆ ಮಹಿಳೆ ಸಾವು, 80 ಮನೆಗಳು ಜಲಾವೃತ!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕೆಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಇಂದು ಬೆಳಗ್ಗೆ ಭೂಕುಸಿತ ಸಂಭವಿಸಿದೆ. ಮಣ್ಣು ಬಿದ್ದಿದ್ದರಿಂದ ಮನೆಗೆ ಹಾನಿಯಾಗಿದೆ. ಮನೆಯೊಳಗೆ ಸಿಲುಕಿಕೊಂಡಿದ್ದವರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜರೀನಾ (49) ಅವರನ್ನು ರಕ್ಷಿಸಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಬಂಟ್ವಾಳ ತಹಸೀಲ್ದಾರ್ ಎಸ್.ಬಿ.ಕೂಡಲಗಿ ಮಾಹಿತಿ ನೀಡಿದ್ದಾರೆ.
ಮುಂಜಾನೆ 6 ಗಂಟೆ ವೇಳೆಗೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ನಂದಾವರ ಗುಂಪುಮನೆ ಎಂಬಲ್ಲಿ ವಾಸವಿರುವ ಮಹಮ್ಮದ್ ಎಂಬವರ ಮನೆ ಮೇಲೆ ಗುಡ್ಡ ಜರಿದುಬಿದ್ದಿದೆ. ಮಣ್ಣಿನಡಿ ಮಹಮ್ಮದ್, ಪತ್ನಿ ಝರೀನಾ ಮತ್ತು ಮಗಳು ಸಫಾ ಸಿಲುಕಿದ್ದರು. ಕೂಡಲೇ ಪಕ್ಕದ ಮನೆಯವರು ಸಂಬಂಧಪಟ್ಟವರಿಗೆ ತಿಳಿಸಿದ್ದು, ರಕ್ಷಣಾ ಕಾರ್ಯ ಕೈಗೊಳ್ಳಲಾಗಿತ್ತು.

ಸ್ಥಳಕ್ಕೆ ಎನ್.ಡಿ.ಆರ್.ಎಫ್, ಪೊಲೀಸ್, ಸಿ.ಆರ್.ಎಫ್, ಅಗ್ನಿಶಾಮಕ ತಂಡ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆರೋಗ್ಯ ಇಲಾಖೆ ಸಿಬಂದಿ, ಆಯಂಬುಲೆನ್ಸ್ ಜೊತೆಗೆ ಆಗಮಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಿದರು. ಬೆಳಗ್ಗೆ 8 ಗಂಟೆಯವರೆಗೆ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಇವರಲ್ಲಿ ಮಹಮ್ಮದ್ ಮತ್ತು ಸಫಾ ಅವರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಆದರೆ ಝರೀನಾ ಮಣ್ಣಿನಡಿ ಸಿಲುಕಿದ್ದರು. ಅವರನ್ನೂ ಕೂಡ ಹೊರಕ್ಕೆ ತಂದು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಮಣ್ಣಿನಡಿ ಸಿಲುಕಿದ ವೇಳೆಯೇ ಪ್ರಾಣ ಹೋಗಿರಬಹುದು ಎಂದು ಹೇಳಲಾಗಿದೆ.

ಮನೆಗಳು ಜಲಾವೃತ: ರಾತ್ರಿ ಹಗಲು ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮಂಗಳೂರು ನಗರದ ತೋಟಬೆಂಗ್ರೆಯಲ್ಲಿ 15 ವರ್ಷಗಳ ಬಳಿಕ ನೀರುನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ. ಇದರ ಪರಿಣಾಮ ಸುಮಾರು 80 ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.  ನಾಲ್ಕು ದಿನಗಳ ನಿರಂತರ ಮಳೆಯಿಂದ ತೋಟಬೆಂಗ್ರೆಯಲ್ಲಿನ ಈ ಅನಾಹುತವು ಉಂಟಾಯಿತು. ನೀರು ನುಗ್ಗಿದ ಹಿನ್ನಲೆಯಲ್ಲಿ ಮನೆಯಲ್ಲಿದ್ದ ಆಸ್ತಿಪಾಸ್ತಿಗಳು ಹಾನಿಗೊಳಗಾಗಿವೆ. ಸಧ್ಯಕ್ಕೆ ಮೋಟಾರಿನ ಸಹಾಯದಿಂದ ಮನೆಯೊಳಗಿನ ನೀರನ್ನು ಖಾಲಿ ಮಾಡಿಸುವ ವ್ಯವಸ್ಥೆ‌ ಮಾಡಲಾಗಿದೆ.
ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago