ಬೆಳಗಾವಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿಯನ್ನು ಹತ್ಯೆ ಮಾಡಲಾಗಿದೆ. ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಕಳೆದ ಬುಧವಾರ ನಾಪತ್ತೆಯಾಗಿದ್ದಾರೆ. ರಾಯಬಾಗ ತಾಲೂಕಿನ ಕಟಕಬಾವಿ ಕುಗ್ರಾಮದಲ್ಲಿ ಆಚಾರ್ಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿಯ ಎಸ್ಪಿ ಸಂಜೀವ್ ಪಾಟೀಲ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿರುವ ಬಗ್ಗೆ ಭಕ್ತರು ಶುಕ್ರವಾರ ದೂರು ನೀಡಿದ್ದರು. ಭಕ್ತರ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೆವು. ಬುಧವಾರ ಹಾಗೂ ಹಿಂದಿನ ದಿನಗಳ ಘಟನಾವಳಿಗಳ ಬಗ್ಗೆ ತನಿಖೆ ನಡೆಸಿದೆವು. ತನಿಖೆಯ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರೆಂಬುದರ ಬಗ್ಗೆ ವಿಚಾರಣೆ ನಡೆಸಲಾಯಿತು.
ಸ್ವಾಮೀಜಿಗೆ ಪರಿಚಯವಿದ್ದ ವ್ಯಕ್ತಿಯನ್ನು ವಿಚಾರಣೆ ಮಾಡಿದೆವು. ಆ ವ್ಯಕ್ತಿ ಆಶ್ರಮದಲ್ಲಿ ಮಹಾರಾಜರನ್ನು ಕೊಲೆ ಮಾಡಿ ಬೇರೆಡೆ ಶವ ಬಿಸಾಕಿದ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ಕೃತ್ಯಕ್ಕೆ ಸಹಕಾರ ನೀಡಿದ್ದ ಓರ್ವನನ್ನು ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಸ್ವಾಮೀಜಿ ನೀಡಿದ್ದ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
ಶ್ರೀ ಕುಮಾರ್ ನಂದಿ ಮಹಾರಾಜರು ಕಳೆದ 15 ವರ್ಷಗಳಿಂದ ನಂದಿ ಪರ್ವತದಲ್ಲಿ ವಾಸವಾಗಿದ್ದರು. ಕಳೆದ ಬುಧವಾರ ಜೈನಮುನಿಗಳು ತಾವು ವಾಸವಿದ್ದ ಕೋಣೆಯಲ್ಲಿ ಪಿಂಚಿ, ಕಮಂಡಲ ಹಾಗೂ ಮೊಬೈಲನ್ನು ಬಿಟ್ಟು ಕಾಣೆಯಾಗಿದ್ದರು. ಸಾಮಾನ್ಯವಾಗಿ ಜೈನಮುನಿಗಳು ಎಲ್ಲೇ ಹೋಗಬೇಕಾದರೂ ಪಿಂಚಿ, ಕಮಂಡಲ ತಗೆದುಕೊಂಡು ಹೋಗುವ ಪದ್ಧತಿ ಇದೆ. ಆದರೆ ಜೈನ ಮುನಿ ನಾಪತ್ತೆಯಾದ ದಿನ ಇವುಗಳು ಆಶ್ರಮದಲ್ಲೇ ಇದ್ದುದರಿಂದ ಭಕ್ತರ ಆತಂಕಕ್ಕೆ ಕಾರಣವಾಗಿತ್ತು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…