ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಾರು ಹಾಗೂ ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ:ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ.5ರಂದು ರಾತ್ರಿ ನಡೆದಿದೆ.


ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಳಾಲು ನಿವಾಸಿ ರವೀಂದ್ರ(48ವ.)ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಎಂಜಿರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಮನೆ ಕಡೆಗೆ ಬರುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ರವೀಂದ್ರ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಮೇಲ್ಸೇತುವೆಯಲ್ಲೇ ಅಪಘಾತ:
ರೆಖ್ಯ ನೇಲ್ಯಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಯ 1 ಬದಿ ಸರಕಾರಿ ಪ್ರೌಢಶಾಲೆ, ಇನ್ನೊಂದು ಬದಿ ಪ್ರಾಥಮಿಕ ಶಾಲೆಯಿದೆ. ರಸ್ತೆಯ ಎರಡು ಬದಿಯೂ ಅಂಗಡಿ, ಮನೆಗಳಿವೆ. ಈ ಹಿನ್ನೆಲೆಯಲ್ಲಿ ಇಲ್ಲಿ ಮೇಲ್ಸೇತುವೆ ರಚನೆಯಾಗಿದೆ. ಕಾಮಗಾರಿ ಸಂಪೂರ್ಣವಾಗಿಲ್ಲ. ಆದರೂ ಮೂರ್‍ನಾಲ್ಕು ವಾರಗಳ ಹಿಂದೆ ಮೇಲ್ಸೇತುವೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಸಮರ್ಪಕವಾದ ಸೂಚನಾ ಫಲಕಗಳು ಇಲ್ಲದೇ ಇರುವುದು ಮತ್ತು ಫೈಓವರ್‌ನ ಮಧ್ಯದಲ್ಲಿ ಇನ್ನೂ ಕಾಮಗಾರಿಗಳು ಅಲ್ಲಲ್ಲಿ ಬಾಕಿ ಇರುವುದರಿಂದ ಬೈಕ್‌ ಸವಾರರಿಗೆ ಸಂಚರಿಸಲು ಕಷ್ಟವಾಗುತ್ತಿದೆ. ಇದೀಗ ಈ ಮೇಲ್ಸೇತುವೆಯಲ್ಲೇ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಕೆಲದಿನಗಳ ಹಿಂದಷ್ಟೇ ಕಳಪೆ ಕಾಮಗಾರಿಯಿಂದಾಗಿ ಎಂಜಿರ ಸಮೀಪದ ಪರಕ್ಕಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಮುರಿದು ಬಿದ್ದಿತ್ತು.ಈ ಬಗ್ಗೆ ಸಾರ್ವಜನಿಕರು ಆಕೋಶ ವ್ಯಕ್ತಪಡಿಸಿದ್ದರು
ಮೃತರು ಪತ್ನಿ, ಇಬ್ಬರ ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!