ನೆಲ್ಯಾಡಿ:ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ.5ರಂದು ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಳಾಲು ನಿವಾಸಿ ರವೀಂದ್ರ(48ವ.)ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಎಂಜಿರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಮನೆ ಕಡೆಗೆ ಬರುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ರವೀಂದ್ರ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೇಲ್ಸೇತುವೆಯಲ್ಲೇ ಅಪಘಾತ:
ರೆಖ್ಯ ನೇಲ್ಯಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಯ 1 ಬದಿ ಸರಕಾರಿ ಪ್ರೌಢಶಾಲೆ, ಇನ್ನೊಂದು ಬದಿ ಪ್ರಾಥಮಿಕ ಶಾಲೆಯಿದೆ. ರಸ್ತೆಯ ಎರಡು ಬದಿಯೂ ಅಂಗಡಿ, ಮನೆಗಳಿವೆ. ಈ ಹಿನ್ನೆಲೆಯಲ್ಲಿ ಇಲ್ಲಿ ಮೇಲ್ಸೇತುವೆ ರಚನೆಯಾಗಿದೆ. ಕಾಮಗಾರಿ ಸಂಪೂರ್ಣವಾಗಿಲ್ಲ. ಆದರೂ ಮೂರ್‍ನಾಲ್ಕು ವಾರಗಳ ಹಿಂದೆ ಮೇಲ್ಸೇತುವೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಸಮರ್ಪಕವಾದ ಸೂಚನಾ ಫಲಕಗಳು ಇಲ್ಲದೇ ಇರುವುದು ಮತ್ತು ಫೈಓವರ್‌ನ ಮಧ್ಯದಲ್ಲಿ ಇನ್ನೂ ಕಾಮಗಾರಿಗಳು ಅಲ್ಲಲ್ಲಿ ಬಾಕಿ ಇರುವುದರಿಂದ ಬೈಕ್ ಸವಾರರಿಗೆ ಸಂಚರಿಸಲು ಕಷ್ಟವಾಗುತ್ತಿದೆ. ಇದೀಗ ಈ ಮೇಲ್ಸೇತುವೆಯಲ್ಲೇ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಕೆಲದಿನಗಳ ಹಿಂದಷ್ಟೇ ಕಳಪೆ ಕಾಮಗಾರಿಯಿಂದಾಗಿ ಎಂಜಿರ ಸಮೀಪದ ಪರಕ್ಕಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಮುರಿದು ಬಿದ್ದಿತ್ತು.ಈ ಬಗ್ಗೆ ಸಾರ್ವಜನಿಕರು ಆಕೋಶ ವ್ಯಕ್ತಪಡಿಸಿದ್ದರು
ಮೃತರು ಪತ್ನಿ, ಇಬ್ಬರ ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…