ಜನ ಮನದ ನಾಡಿ ಮಿಡಿತ

Advertisement

ಜೂ. 9 ರಂದು ಸುರತ್ಕಲ್ ಬಂಟರ ಸಂಘದ ಮಹಾಸಭೆ, ಸಹಾಯ ಹಸ್ತ, ಅಭಿನಂದನೆ, ವಿದ್ಯಾರ್ಥಿ ವೇತನ ವಿತರಣೆ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 24 ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜೂ. 9 ರಂದು ಭಾನುವಾರ ಸಂಜೆ 5 ಗಂಟೆಗೆ ಬಂಟರ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 9.30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, 10.30 ಕ್ಕೆ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸುರತ್ಕಲ್ ಬಂಟರ ಸಂಘದ ಗ್ರಾಮವಾರು ಸಾಂಸ್ಖೃತಿಕ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ಅಭಿನಂದನಾ ಸಮಾರಂಭ, ಸಹಾಯಹಸ್ತ, ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.

ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬೆಂಗಳೂರು ಯುವ ಬಂಟರ ಸಂಘದ ಅಧ್ಯಕ್ಷ ರವೀಂದ್ರನಾಥ ಮಾರ್ಲ ಭಾಗವಹಿಸಲಿದ್ದಾರೆ.ಸಮಾರಂಭದಲ್ಲಿ ಅಭಿನಂದನೆ, ನಿರಂತರ ವಿದ್ಯಾರ್ಥಿ ವಿತರಣೆ, ಸಹಾಯಹಸ್ತ, ವಿದ್ಯಾರ್ಥಿ ವೇತನ ವಿತರಣೆ, ನೂತನ ಮನೆಯ ಕೀ ಹಸ್ತಾಂತರ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!