ಮಂಗಳೂರು; 2024ನೇ ಸಾಲಿನ ರ‍್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಜೂನ್ 7ರಿಂದ ಜೂನ್ 9ರ ವರೆಗೆ ನಗರದ ಬಲ್ಮಠ ಮಹಿಳಾ ಪದವಿ ಪರ‍್ವ ಕಾಲೇಜು ಕೇಂದ್ರದಲ್ಲಿ ನಡೆಯಲಿರುವುದರಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕರ‍್ಯನರ‍್ವಾಹಕ ದಂಡಾಧಿಕಾರಿಗಳು ಹಾಗೂ ಉಪ ಪೊಲೀಸ್ ಆಯುಕ್ತರಾದ ಸಿದ್ಧರ‍್ಥ್ ಗೋಯಲ್ ಅವರು ನಿಷೆೀದಾಜ್ಞೆ ವಿಧಿಸಿ ಆದೇಶಿಸಿದ್ದಾರೆ.
ಪರೀಕ್ಷಾ ದಿನಗಳಂದು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರರ‍್ಶಕವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಅಹಿತಕರ ಘಟನೆಗಳು ನಡೆಯದಂತೆ ನಿಷೆೀಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ರ‍್ಥಿಗಳನ್ನು ಹೊರತುಪಡಿಸಿ ಸರ‍್ವಜನಿಕರು ಐದು ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೆೀಧಿಸಲಾಗಿದೆ. ನಿಷೆೀಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಅಥವಾ ಇನ್ನು ಯಾವುದೇ ವಸ್ತುಗಳನ್ನು ಹಂಚುವುದು ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪರ‍್ಣವಾಗಿ ನಿಷೆೀಧಿಸಿದೆ.
ನಿಷೆೀಧಿತ ವಲಯದಲ್ಲಿ ಯಾವುದೇ ರೀತಿಯ ಕ್ಷಾರಕ ಆಸಿಡ್ ಸ್ಪೋಟಕ ವಸ್ತುಗಳನ್ನು ಸಾಗಿಸುವುದು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೆೀಧಿಸಲಾಗಿದೆ. ನಿಷೆೀಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ¸ಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪರ‍್ಣವಾಗಿ ನಿಷೆೀಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ರ‍್ಧ ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕರ‍್ಯನರ‍್ವಹಿಸುವುದನ್ನು ನಿಷೆೀಧಿಸಿದೆ. ನಿಷೆೀಧಿತ ವಲಯದಲ್ಲಿ ಮೊಬೈಲ್ ದೂರವಾಣಿ ಬ್ಲೂಟೂತ್ ಹಾಗೂ ಪೇಜ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂರ‍್ಕ ಉಪಕರಣಗಳ ಬಳಕೆಯನ್ನು ಸಂಪರ‍್ಣವಾಗಿ ನಿಷೆೀಧಿಸಲಾಗಿದೆ.
ವಿಶೇಷ ಶಿಕ್ಷಕರಿಂದ ರ‍್ಜಿ ಆಹ್ವಾನ
ಮಂಗಳೂರು,ಜೂ.7(ಕ.ವಾ):- ಸಮನ್ವಯ ಶಿಕ್ಷಣದ ಕರ‍್ಯತಂತ್ರದಡಿಯಲ್ಲಿ 2024-25ನೇ ಸಾಲಿಗೆ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ವಿಶೇಷ ಶಿಕ್ಷಕರಿಂದ ರ‍್ಜಿ ಆಹ್ವಾನಿಸಲಾಗಿದೆ.
ವಿಕಲಚೇತನ ಮಕ್ಕಳಿಗೆ ಬೋಧಿಸುವ ವಿಶೇಷ ಪ್ರೌಢ ಶಿಕ್ಷಕರು ಬಿ.ಇಡಿ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ ವಿದ್ಯರ‍್ಹತೆ ಪ್ರಮಾಣ ಪತ್ರ ಹೊಂದಿರಬೇಕು.
ಬಿ.ಐ.ಇ.ಆರ್.ಟಿ ಶಾಲೆಗಳು:
ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮೂಡಬಿದ್ರೆ ಹಾಗೂ ಪುತ್ತೂರು ತಾಲೂಕಿನ ಪ್ರೌಢ ವಿಭಾಗದಲ್ಲಿ ತಲಾ 2 ಹುದ್ದೆಗಳು ಖಾಲಿ ಇದೆ. ಸುಳ್ಯ ತಾಲೂಕಿನ ಪ್ರರ‍್ಥಮಿಕ ವಿಭಾಗದಲ್ಲಿ 1, ಪ್ರೌಢ ವಿಭಾಗದಲ್ಲಿ 2 ಹುದ್ದೆ ಖಾಲಿ ಇದೆ. ಒಟ್ಟು ಪ್ರಾಥಮಿಕ ವಿಭಾಗದಲ್ಲಿ 1, ಪ್ರೌಢ ವಿಭಾಗದಲ್ಲಿ 14 ಹುದ್ದೆಗಳಿಗೆ 2025ನೇ ಸಾಲಿನ ಮರ‍್ಚ್ 31 ರ ವರೆಗೆ ನೇರ ಗುತ್ತಿಗೆ ಮೂಲಕ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.
ರ‍್ಹ ಅಭ್ರ‍್ಥಿಗಳು ಸೂಕ್ತ ದಾಖಲೆಯೊಂದಿಗೆ ನಗರದ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್‍ನ ಸಮಗ್ರ ಶಿಕ್ಷಣ ರ‍್ನಾಟಕ ಕಚೇರಿಗೆ ಜೂನ್ 14 ರೊಳಗೆ ರ‍್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9480886934 ಸಂರ‍್ಕಿಸುವಂತೆ ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ : ಜೂನ್ 12ರ ರಂದು ಲೋಕಾಯುಕ್ತ ಜನಸಂರ‍್ಕ ಸಭೆ
ಮಂಗಳೂರು,ಜೂ.7(ಕ.ವಾ):- ಲೋಕಾಯುಕ್ತ ಮಂಗಳೂರು ವಿಭಾಗದ ಪೆÇಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜೂನ್ 12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂರ‍್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ರ‍್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ರ‍್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೆÇಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೆÇಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420, 9364062579, ಪೆÇಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420, 9364062580. ಪೆÇಲೀಸ್ ನಿರೀಕ್ಷಕರ ಕಚೇರಿ-1 :0824-2427237, 936402691. ಪೆÇಲೀಸ್ ನಿರೀಕ್ಷಕರ ಕಚೇರಿ-2 :0824-2427237,9364062692. ಪೆÇಲೀಸ್ ನಿರೀಕ್ಷಕರ ಕಚೇರಿ-3 :0824-2427237, 9972991718. ಪೆÇಲೀಸ್ ನಿರೀಕ್ಷಕರ ಕಚೇರಿ -3 :0824-2427237, 9481639937. ಸಂಖ್ಯೆಗಳನ್ನು ಸಂರ‍್ಕಿಸುವಂತೆ ರ‍್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗಡಿ ಬರ‍್ಡುಗಳಲ್ಲಿ ಕನ್ನಡ ಕಡ್ಡಾಯ
ಮಂಗಳೂರು,ಜೂ.7(ಕ.ವಾ):- ರಾಜ್ಯದಲ್ಲಿ ಕರ‍್ಯ ನರ‍್ವಹಿಸುತ್ತಿರುವ ಎಲ್ಲಾ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರಗಳ ಉದ್ದಿಮೆಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೇಲ್‍ಗಳು ಮುಂತಾದವುಗಳು ತಮ್ಮ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನು 60% ಪ್ರರ‍್ಶಿಸುವುದು ಕಡ್ಡಾಯವಾಗಿದೆ.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರಿಗೆ ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಶೇ. 60% ರಷ್ಟು ಪ್ರರ‍್ಶಸುವ ನಿಬಂಧನೆಯನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಉದ್ದಿಮೆ ಪರವಾನಿಗೆ ನವೀಕರಣ ಅಥವಾ ಹೊಸದಾಗಿ ಮಂಜೂರಾತಿ ಸಮಯದಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದ್ದು. ಸಾಕಷ್ಟು ಉದ್ದಿಮೆದಾರರು ರ‍್ಕಾರದ ನೀತಿಯಂತೆ ಕನ್ನಡ ನಾಮಫಲಕವನ್ನು ಪ್ರರ‍್ಶಿಸುತ್ತಿರುವುದು ಕಂಡುಬರುತ್ತಿದೆ.
ಕೆಲವೊಂದು ಉದ್ದಿಮೆದಾರರು ಸದ್ರಿ ಆದೇಶವನ್ನು ಉಲ್ಲಂಘಿಸಿ ಆಂಗ್ಲ ಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸುತ್ತಿರುವ ಬಗ್ಗೆ ಸರ‍್ವಜನಿಕರಿಂದ ಬರುತ್ತಿರುವ ದೂರುಗಳನ್ನು ಗಂಭಿರವಾಗಿ ಪರಿಗಣಿಸಲಾಗಿದೆ. ಆದುದರಿಂದ ಇನ್ನು ಮುಂದೆ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ.
ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಿಗೆಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…