ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಕೂಗು ಹಿನ್ನೆಲೆ
ಪುತ್ತೂರು ವಿ.ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಅಚ್ಚರಿಯ ಬೆಳವಣಿಗೆ
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ರಾಜೀನಾಮೆ
ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಕೂಗು ಬೆನ್ನಲ್ಲೇ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮತ್ತು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ.



