ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.
ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.
ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ರೀಟಾ ಡಿ ಸೋಜ ಎಂಬವರ ಮನೆಯಲ್ಲಿ ಬಾಡಿಗೆಗೆ ನೆಲೆಸಿದ್ದರು.
ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು,ಆಕೆಯನ್ನು ಮಂಗಳೂರಿನಲ್ಲೆ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು.ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ.
ಮದ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಹೋಗಿದ್ದ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಮೃತ ರಬೀನ ತಂದೆ,ತಾಯಿ,ಇಬ್ಬರು ಸಹೋದರಿಯರು ,ಓರ್ವ ಸಹೋದರನನ್ನು ಅಗಲಿದ್ದಾರೆ
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…