ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಡಿಕ್ಕಿಯಾಗಿ ಮೃತ ಪಟ್ಟ ಘಟನೆ ಜೂನ್. 9 ರಂದು ಬೆಳಿಗ್ಗೆ ತುಂಬೆಯಲ್ಲಿ ನಡೆದಿದೆ.
ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಮನೆಗೆ ಸಾಮಾಗ್ರಿಗಳನ್ನು ತರುವ ಉದ್ದೇಶದಿಂದ ತುಂಬೆ ಪೇಟೆಗೆ ಹೋಗುತ್ತಿದ್ದ ಸೇಸಪ್ಪ ಅವರು ವೈಶಾಲಿ ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ತಲೆ ಹಾಗೂ ಮುಖಕ್ಕೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…