ಜನ ಮನದ ನಾಡಿ ಮಿಡಿತ

Advertisement

ಮುಡಿಪು: ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ; ಮುಖಂಡರು ಭೇಟಿ

ಮೋದಿ ಪ್ರಮಾಣವಚನ‌ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಬೆಳಕಿಗೆ ಬಂದಿದೆ.

ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಚೂರಿ ಇರಿತಕ್ಕೆ ಒಳಗಾದವರು.

ಗಾಯಾಳುಗಳಿಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ತಂಡವೊಂದು ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ವರದಿಯಾಗಿದೆ.

ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!