ಮೋದಿ ಪ್ರಮಾಣವಚನ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಬೆಳಕಿಗೆ ಬಂದಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಚೂರಿ ಇರಿತಕ್ಕೆ ಒಳಗಾದವರು.
ಗಾಯಾಳುಗಳಿಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ತಂಡವೊಂದು ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ವರದಿಯಾಗಿದೆ.
ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…