ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಮೂರು ಪಕ್ಷಗಳ ಒಂದಕ್ಕಿಂತ ಹೆಚ್ಚು ಲಕ್ಷ ಕಾರ್ಯಕರ್ತರು ಮತ್ತು ಕೇಡರ್ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಆಂಧ್ರಪ್ರದೇಶ ಸರ್ಕಾರದ ಸಚಿವರಾಗಿ ನಟ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಟಿಡಿಪಿ ಮುಖ್ಯಸ್ಥರ ಪುತ್ರ ನಾರಾ ಲೋಕೇಶ್ ಸೇರಿದಂತೆ 22 ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 11 ರಂದು ಮಂಗಳವಾರ ನಡೆದ ಪ್ರತ್ಯೇಕ ಸಭೆಗಳಲ್ಲಿ ತೆಲುಗು ದೇಶಂ ಶಾಸಕಾಂಗ ಪಕ್ಷ ಮತ್ತು ಎನ್‌ಡಿಎ ಪಾಲುದಾರರು ನಾಯ್ಡು ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು.



