ಮಂಗಳೂರು : ಎರಡನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಗೌರವಿಸಿದರು.
ವಿಧಾನ ಪರಿಷತ್ ಸದಸ್ಯರಾಗಿ ನಿಮ್ಮ ಸೇವಾ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಕೆಲಸ ಕಾರ್ಯಗಳು ನಡೆಯಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.
ಈ ವೇಳೆ ಮಾತನಾಡಿದ ಐವನ್ ಡಿ ಸೋಜಾ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಕಷ್ಟಗಳನ್ನು ನಿವಾರಿಸುವ ಕೆಲಸದಲ್ಲಿ ತೊಡಗಿದೆ. ವಿಧಾನ ಪರಿಷತ್ ಸದಸ್ಯನಾಗಿ ತಾನು ಬಂಟರ ಯಾವುದೇ ಕೆಲಸ ಕಾರ್ಯ ಇದ್ದರೂ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನಿಯೋಗದಲ್ಲಿ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೊಲ್ಲಾಡಿ ಬಾಲಕೃಷ್ಣ ರೈ, ಹೇಮಂತ್ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…