ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವ ಜೂ. 15ರಂದು ನಡೆಯಲಿದ್ದು, ಡಾ.ರೊನಾಲ್ಡ್ ಕೂಲಾಸೋ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದೀನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು ಎಂದು ವಿವಿಯ ಉಪ ಕುಲಪತಿ ಡಾ.ಪಿ.ಎಲ್.ಧರ್ಮ ತಿಳಿಸಿದರು.
ಮಂಗಳೂರಿನ ವಿವಿ ಕಾಲೇಜಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಬಾರಿ ಗೌರವ ಡಾಕ್ಟರೇಟ್‌ಗಾಗಿ 12 ಪ್ರಸ್ತಾವನೆಗಳು ಬಂದಿದ್ದು, ಮೂರು ಹೆಸರುಗಳನ್ನು ಆಯ್ಕೆ ಮಾಡಿ ಕುಲಾಧಿಪತಿಗಳು ನೀಡಿದ್ದಾರೆ ಎಂದು ತಿಳಿಸಿದರು. ವಿಶ್ವವಿದ್ಯಾನಿಲಯಕ್ಕೆ ವಿವಿಧ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯಮ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಸಾಧನೆ ಮಾಡಿರುವ, ಸೇವೆ ನೀಡಿರುವ ಗಣ್ಯ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್‌ಗಾಗಿ ಬರುವ ಪ್ರಸ್ತಾವನೆಗಳನ್ನು ಸಿಂಡಿಕೇಟ್ ಸಭೆಯಲ್ಲಿ ದಾಖಲೆಯೊಂದಿಗೆ ಇರಿಸಿ ಸಿಂಡಿಕೇಟ್ ಸಭೆಯ ನಿರ್ಣಯದ ಪ್ರಕಾರ ಕುಲಾಧಿಪತಿಗಳಿಗೆ ರವಾನಿಸಲಾಗುತ್ತದೆ. ಅವರು ಅಂತಿಮ ಆಯ್ಕೆ ಮಾಡಿ ಕಳುಹಿಸುತ್ತಾರೆ ಎಂದು ತಿಳಿಸಿದರು.
ಜೂ.15ರಂದು ಮಧ್ಯಾಹ್ನ ೧೨:೧೫ಕ್ಕೆ ಮಂಗಳೂರು ವಿವಿ ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ. ಹೊಸದಿಲ್ಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಮಹಾ ನಿರ್ದೇಶಕ ಪ್ರೊ.ಸಚಿನ್ ಚತುರ್ವೇದಿ ಮುಖ್ಯ ಅತಿಥಿಯಾಗಿ ಭಾಷಣ ಮಾಡುವರು. ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಯಾಗಿರುವ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿರುವರು. ರಾಜ್ಯ ಉನ್ನತ ಶಿಕ್ಷಣ ಸಚಿವ ಹಾಗೂ ವಿವಿಯ ಸಹಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಈ ಬಾರಿ ಸರಕಾರದ ನಿಯಮದಂತೆ ಘಟಿಕೋತ್ಸವದಲ್ಲಿ ಐದು ನಿಮಿಷಗಳ ಕಾಲ ಮಾತನಾಡುವ ಅವಕಾಶವಿದೆ ಎಂದರು.
ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 155 ಮಂದಿಗೆ ಪಿ.ಎಚ್.ಡಿ. ಡಾಕ್ಟರೇಟ್ ಪದವಿ (ಕಲೆ -51, ವಿeನ -73, ವಾಣಿಜ್ಯ 26, ಶಿಕ್ಷಣ -05) ಇವರಲ್ಲಿ 6೦ ಮಹಿಳೆಯರು ಮತ್ತು 65 ಪುರುಷರು. ಈ ಬಾರಿ ೧೮ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಹಾಗೂ 4 ಅಂತಾರಾಷ್ಟ್ರೀಯ ಮಹಿಳಾ ವಿದ್ಯಾರ್ಥಿಗಳು ಪಿ.ಎಚ್.ಡಿ ಪದವಿ ಪಡೆಯಲಿರುವರು. 58 ಚಿನ್ನದ ಪದಕ ಮತ್ತು 57 ನಗದು ಬಹುಮಾನಗಳಿದ್ದು, ವಿವಿಧ ಕೋರ್ಸ್‌ಗಳ ಒಟ್ಟು 168ರ‍್ಯಾಂಕ್‌ಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ 72 ಮಂದಿಗೆ ರ‍್ಯಾಂಕ್ ಪ್ರಮಾಣ ಪತ್ರ ನೀಡಲಾಗುವುದು. ಇವರಲ್ಲಿ ಸ್ನಾತಕೋತ್ತರ ಪದವಿ -52 ಮತ್ತು 2೦ ಪದವೀಧರರು ಎಂದು ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯ 2022-23ನೆ ಸಾಲಿಗೆ ನಡೆಸಿದ ವಿವಿಧ ಪರೀಕ್ಷೆಗಳಲ್ಲಿ ಒಟ್ಟು 29465 ವಿದ್ಯಾರ್ಥಿಗಳು ಹಾಜಾಗಿದ್ದು, 21219 (ಶೇ. 72.35) ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಗೆ ೩೨೭೭ ವಿದ್ಯಾರ್ಥಿಗಳು ಹಾಜರಾಗಿದ್ದು, 2094 (ಶೇ. 94.42) ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.
ಕುಲಸಚಿವ ರಾಜುಮೊಗವೀರ, ಹಣಕಾಸು ವಿಭಾಗದ ಪ್ರೊ. ಸಂಗಪ್ಪ, ಪರೀಕ್ಷಾಂಗ ಕುಲಸಚಿವ ಡಾ. ದೇವೇಂದ್ರಪ್ಪ, ಮಂಗಳೂರು ವಿ. ವಿ. ಕಾಲೇಜು ಪ್ರಾಂಶುಪಾಲ ಗಣಪತಿ ಗೌಡ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…