ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಉಡುಪಿ: ಗಿನ್ನಿಸ್ ದಾಖಲೆ ಸೇರ್ಪಡೆಯಾಗುವ ಯತ್ನದಲ್ಲಿ ಮನೋಹರ್ ಆವಿಷ್ಕರಿಸಿದ ದೂರದರ್ಶಕ

ಉಡುಪಿ: ಮಣಿಪಾಲ ಎಂಐಟಿಯ ಉದ್ಯೋಗಿ, ಪರ್ಕಳದ ನಿವಾಸಿ ಸಂಶೋಧಕ ಆರ್.ಮನೋಹರ್ ತನ್ನದೇ ಸೂತ್ರ ಬಳಸಿ ಏಕಕಾಲಕ್ಕೆ ಎರಡು ಕಣ್ಣುಗಳಲ್ಲಿ ನೇರವಾಗಿ ನೋಡುವ ರೀತಿಯಲ್ಲಿ ಆವಿಷ್ಕರಿಸಿರುವ ದೂರದರ್ಶಕ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಪ್ರಯತ್ನದಲ್ಲಿದೆ. ದಾಖಲೆಗಾಗಿ ಮನೋಹರ್ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.


ಇವರು ಈಗಾಗಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೇಟೆಂಟ್ ಪಡೆದು ಒಂದು ಕಣ್ಣಿನಲ್ಲಿ ನೇರವಾಗಿ ನೋಡುವ ದೂರದರ್ಶಕವನ್ನು ಆವಿಷ್ಕರಿಸುವ ಮೂಲಕ ಜಗತ್ತಿನ 9 ಮಂದಿಯಲ್ಲಿ ಒಬ್ಬರಾಗಿದ್ದಾರೆ. ಇದೀಗ ಮತ್ತೊಮ್ಮೆ ಆವಿಷ್ಕರಿಸಿ ಎರಡು ಕಣ್ಣಿನಲ್ಲಿ ಏಕಕಾಲಕ್ಕೆ ನೋಡುವಂತಹ ದೂರದರ್ಶಕವನ್ನು ಅವರು ಆವಿಷ್ಕರಿಸಿದ್ದಾರೆ. ಸದ್ಯದಲ್ಲಿ ಗಿನ್ನಿಸ್ ದಾಖಲೆ ತಂಡ ಪರ್ಕಳಕ್ಕೆ ಭೇಟಿ ನೀಡಲಿದೆ.
ಈ ದೂರದರ್ಶಕವು ಸುಮಾರು 80 ಎಕ್ಸ್ ದೂರದ ವಸ್ತು ಕಾಣುವ ತಂತ್ರಜ್ಞಾನ ಹೊಂದಿದ್ದು, ಈ ದೂರದರ್ಶಕದಲ್ಲಿ ಚಂದ್ರ ಮನಮೋಹಕನಾಗಿ ಕಾಣುತ್ತದೆ. ಈ ನವೀಕರಿಸಲ್ಪಟ್ಟ ದೂರದರ್ಶಕ ಎಚ್‌ಡಿ ಕ್ವಾಲಿಟಿಯನ್ನು ಹೊಂದಿದೆ. ಮಾರುಕಟ್ಟೆಯಲ್ಲಿ ಸಿಗುವಂತಹ ದೂರದರ್ಶಕದಲ್ಲಿ ಬಾಗಿ ಒಂದು ಕಣ್ಣಿನಲ್ಲಿ ನೋಡಬೇಕಾದರೆ, ಈ ಹೊಸ ಆವಿಷ್ಕಾರದ ದೂರದರ್ಶಕದಲ್ಲಿ ಆ ಕಷ್ಟ ಇರುವುದಿಲ್ಲ. ಇಲ್ಲಿ ಬಾಗಿ ನೋಡುವ ಬದಲು ನೇರವಾಗಿ ನಿಂತು ನೋಡ ಬಹುದಾಗಿದೆ. ಅದಕ್ಕಾಗಿ ಬೆಳಕಿನ ಪರಿವರ್ತನೆ ಮಾಡಿ ದೂರದರ್ಶಕವನ್ನು ನಿರ್ಮಿಸಿ ಪೇಟೆಂಟು ಪಡೆಯಲಾಗಿದೆ ಎಂದು ಮನೋಹರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!