ಮುಲ್ಕಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶನದಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು, ಕೆಮ್ರಾಲ್ ಮತ್ತು ಕಿಲ್ಪಾಡಿ ಉಪ ಕೇಂದ್ರದ ಸಹಭಾಗಿತ್ವದಲ್ಲಿ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರ ನಡೆಯಿತು.

ಸಮುದಾಯ ಆರೋಗ್ಯ ಅಧಿಕಾರಿ ಶೆರ್ಲಿನ್ ಲೋಬೊ ಮಾತನಾಡಿ ಮಳೆಗಾಲದಲ್ಲಿ ಮಾರಕ ರೋಗಗಳಿಂದ ರಕ್ಷಿಸಲು
ಮನೆಯ ಪರಿಸರವನ್ನು ಸ್ವಚ್ಛವಾಗಿ ಇಡುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು
ಈ ಸಂದರ್ಭ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಪದ್ಮಿನಿ ಶೆಟ್ಟಿ, ಕ್ಷೇತ್ರದ ಮಾಜೀ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.



