ಕರಾವಳಿ

ಕಿನ್ನಿಗೋಳಿ:ಹೋಟೆಲ್, ವಸತಿ ಸಂಕೀರ್ಣ ಗಳ ತ್ಯಾಜ್ಯ ನೀರು ವಿಲೇವಾರಿಗೆ ಶಾಶ್ವತ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಒತ್ತಾಯ

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಹು ಮಹಡಿ ಕಟ್ಟಡ,ಮನೆ, ವಾಣಿಜ್ಯ ವಸತಿ ಸಮುಚ್ಚಯದ ತ್ಯಾಜ್ಯ ನೀರನ್ನು ದ್ರವ ತ್ಯಾಜ್ಯ ಘಟಕಕ್ಕೆ ಅನಧಿಕೃತವಾಗಿ ಬಿಡುತ್ತಿರುವುದರಿದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತ್ತುಲ್ ಪರಿಸರದಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿದು ಹೋಗದೆ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು ಶಾಶ್ವತ ವ್ಯವಸ್ಥೆ ಕಲ್ಪಿಸಲು ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಕಿನಿಗೊಳಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ವಾಣಿಜ್ಯ ವಸತಿ ಸಮುಚ್ಚಯ,ಹೋಟೆಲ್ ಮಾಲೀಕರ, ಸಾರ್ವಜನಿಕರ ಸಭೆ ನಡೆಯಿತು.
ಸಭೆಯಲ್ಲಿ ಉದ್ಯಮಿ ಪ್ರಮೋದ್ ಕುಮಾರ್ ಮಾತನಾಡಿ ಹೋಟೆಲ್, ವಸತಿ ಸಂಕೀರ್ಣಗಳ ತ್ಯಾಜ್ಯ ನೀರು ಸರಿಯಾದ ರೀತಿಯಲ್ಲಿ ಹರಿದು ಹೋಗಲು ಶಾಶ್ವತ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿದರು.


ಸಾಮಾಜಿಕ ಕಾರ್ಯಕರ್ತ ಸ್ಟ್ಯಾನಿ ಪಿಂಟೋ ಮಾತನಾಡಿ ಹಿಂದಿನ ಕಿನ್ನಿಗೋಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಲಕ್ಷದಿಂದ ತ್ಯಾಜ್ಯ ಬಿಡುವ ಅವೈಜ್ಞಾನಿಕ ಕಾಮಗಾರಿ ನಡೆದಿದ್ದು ಈಗಲೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಇದೇ ಧೋರಣೆಯನ್ನು ಅನುಸರಿಸುತ್ತಿದ್ದಾರೆ, ಇಲ್ಲಿನ ಅಧಿಕಾರಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಇದರಿಂದ ಅಭಿವೃದ್ಧಿಗೆ ತೀವ್ರ ಹಿನ್ನಡೆಯಾಗಿದೆ , ಅಭಿವೃದ್ಧಿ ಬಗ್ಗೆ ಮಾತನಾಡಿದರೆ ನಮ್ಮ ಮೇಲೆ ಕೇಸ್ ಹಾಕುವ ಬೆದರಿಕೆ ಒಡ್ಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತ್ಯಾಜ್ಯ ನಿರ್ವಹಣೆ ಅವ್ಯವಸ್ಥೆಯಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತುಲ್ ಪರಿಸರದ ಜನ ಹೈರಾಣಾಗಿದ್ದಾರೆ ಇದಕ್ಕೆ ಪೂರ್ಣ ಪ್ರಮಾಣದ ಪರಿಹಾರ ಬೇಕು ಎಂದು ಒತ್ತಾಯಿಸಿದರು.


ಸ್ಥಳೀಯರಾದ ಐವಾನ್ ಮಾತನಾಡಿ ತ್ಯಾಜ್ಯ ನೀರು ಬಿಡುವ ಪ್ಲಾಂಟ್ ಶುರುವಾಗುವ ಮೊದಲೇ ನಾವು ಆಕ್ಷೇಪ ವ್ಯಕ್ತಪಡಿಸಿದ್ದೇವೆ. ಆದರೂ ಹಿಂದಿನ ಪಂಚಾಯತ್ ಆಡಳಿತ ಕ್ಯಾರೇ ಎನ್ನದೆ ಅರ್ಧಂಬರ್ಧ ಕಾಮಗಾರಿ ನಡೆಸಿ ಈಗ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು ಮಾಜೀ ಜಿ.ಪಂ. ಉಪಾಧ್ಯಕ್ಷೆ ಶಾಲೆಟ್ ಪಿಂಟೋ ಮಾತನಾಡಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ಚುನಾಯಿತ ಸದಸ್ಯರು ಇಲ್ಲದೆ ಆಡಳಿತಾಧಿಕಾರಿಗಳು ತಮ್ಮದೇ ಆಟ ಆಡುತ್ತಿದ್ದು ಅವ್ಯವಸ್ಥೆಗಳ ಬಗ್ಗೆ ಶಾಸಕರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಮಾತನಾಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ವಾಹನ ಪ್ರತೀ ಮನೆಗೆ ಹೋಗದಿದ್ದರೂ ಮನೆಯವರಿಂದ ತ್ಯಾಜ್ಯ ವಿಲೇವಾರಿ ಹಣ ವಸೂಲು ಮಾಡಲಾಗುತ್ತಿದೆ ಇದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು
ಶಾಸಕ ಉಮಾನಾಥ ಕೋಟ್ಯಾನ್ ನಾಗರಿಕರನ್ನು ಸಮಾಧಾನಪಡಿಸಿ ಮಾತನಾಡಿ ತ್ಯಾಜ್ಯ ನೀರಿನ ಘಟಕದಲ್ಲಿರುವ ಅನಧಿಕೃತ ಕನೆಕ್ಷನ್ ಕೂಡಲೇ ತೆಗೆಯಬೇಕು, ದ್ರವ ತ್ಯಾಜ್ಯ ಮಾತ್ರ ಬಿಡಬೇಕು, ನಾಗರಿಕರ ಹಾಗೂ ಹೋಟೆಲ್ ವಸತಿ ಸಮುಚ್ಚಯ ಮಾಲಕರ ಸಮಿತಿ ರಚನೆ ಮಾಡಿ ಘಟಕವನ್ನು ಶುದ್ಧೀಕರಣ ಗೊಳಿಸಬೇಕು ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯತ್ ಮೂಲಕ ಜಾಗ ಗುರುತಿಸಿ 10 ಕೋಟಿ ವೆಚ್ಚದಲ್ಲಿ ನೂತನ ಘನತ್ಯಾಜ್ಯ ಘಟಕ ನಿರ್ಮಾಣ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗರಾಜ್, ಜೂನಿಯರ್ ಇಂಜಿನಿಯರ್ ನಾಗರಾಜ್ ಎಚ್ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…

3 days ago

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…

3 days ago

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…

3 days ago

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…

3 days ago

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…

3 days ago

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…

4 days ago