ಮೂಡುಬಿದಿರೆ: ದರೆಗುಡ್ಡೆಯಲ್ಲಿ ಮೂರು ವಾಹನಗಳು ಪರಸ್ಪರ ಢಿಕ್ಕಿಯಾಗಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ. ನಾಟಿಗೆಂದು ನೇಜಿಯನ್ನು ಹೊತ್ತೊಯ್ಯುತ್ತಿದ್ದ ಮರೋಡಿ ಮೂಲದ ಪಿಕಪ್ ವಾಹನ ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ ಸಾಗಿ ಹಂಗೊಟ್ಟು ಎಂಬಲ್ಲಿ ಬೊಲೇರೋ ಕಾರು ಹಾಗೂ ರಿಕ್ಷಾವೊಂದಕ್ಕೆ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಸಂಪೂರ್ಣ ರಿಕ್ಷಾ ನುಜ್ಜುಗುಜ್ಜಾಗಿದ್ದು ವಾಹನಗಳಲಿದ್ದ
ಸವಾರರು ಅಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



