ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕಾವು ಹೇಮನಾಥ ಶೆಟ್ಟಿ ..

ಪುತ್ತೂರು: ತಾಲ್ಲೂಕು ಬಂಟರ ಸಂಘದ ನೂತನ‌ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣಾ ಅಧಿಕಾರಿಯಾಗಿ ಹಿರಿಯ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ ರೈ ಇವರಿಂದ ಅಧಿಕೃತವಾಗಿ ಘೋಷಿಸಲು ಬಾಕಿ ಇದೆ. ನಾಮಪತ್ರ ಸಲ್ಲಿಕೆಗೆ ಜೂ. 15 ಕಡೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಹೇಮನಾಥ ಶೆಟ್ಟಿ ಯವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹೇಮನಾಥ ಶೆಟ್ಟಿ

1964 ರ ಡಿಸೆಂಬರ್ 21ರಂದು, ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಬನ್ನೂರು ಗುತ್ತು ಮನೆಯಲ್ಲಿ ಕಾವು ಅಂತಪ್ಪ ಶೆಟ್ಟಿ ಮತ್ತು ಬನ್ನೂರು ಗುತ್ತು ತಾರಾ ಅಂತಪ್ಪ ಶೆಟ್ಟಿ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣವನ್ನು ಮಡಿಕೇರಿ ಸೈಂಟ್ ಮೈಕೆಲ್ ಶಾಲೆಯಲ್ಲಿ ಪ್ರಾರಂಭಿಸಿ ನಂತರ ಮಾಡ್ನೂರು ಕಾವು ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪೆರ್ನಾಜೆ ಸೀತಾರಾಘವ ಪ್ರೌಢಶಾಲೆ ಮತ್ತು , ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪಡೆದು, ಸುಳ್ಯ ಕೆ ವಿ ಜಿ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ಶಿಕ್ಷಣವನ್ನು ಅಭ್ಯಸಿಸಿದರು. ಪುತ್ತೂರು ಸಂತಫಿಲೋಮಿನಾ ಕಾಲೇಜಿನಲ್ಲಿ ಬಿ ಎ ಪದವಿ ಶಿಕ್ಷಣವನ್ನು ಪಡೆದರು.ಎನ್ ಎಸ್ ಯು ಐ ಪುತ್ತೂರು ತಾಲೂಕು ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, 9 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿ, ರಾಜಕೀಯವಾಗಿ ಜಿಲ್ಲೆ,ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿಯಾಗಿ ಆರು ವರ್ಷ ಸೇವೆ ಮಾಡಿದ ಇವರು ಇದೀಗ 2 ನೇ ಅವಧಿಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುಮಾರು 10 ವರುಷಗಳಿಂದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾಗಿದ್ದಾರೆ.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಸಮಿತಿ ಸದಸ್ಯರಾಗಿದ್ದಾರೆ. ಹೇಮನಾಥ ಶೆಟ್ಟಿಯವರ ಪತ್ನಿ ಮುಂಡಾಳ ಗುತ್ತು ಅನಿತಾ ಹೇಮನಾಥ ಶೆಟ್ಟಿ ಯವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ, ಎರಡು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ , ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿದ್ದರು.ಇವರಿಗೆ ಎರಡು ಪುತ್ರಿಯರು ಹಿರಿಯ ಮಗಳು ಡಾ ವಾಸ್ತವಿ ಶೆಟ್ಟಿ MBBS ಮುಗಿಸಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿ ನಂತರ ಪುತ್ತೂರಿನಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಕ್ಲೀನಿಕ್ ನಲ್ಲಿ ಸೇವೆ ಸಲ್ಲಿಸಿ ಈಗ ಉನ್ನತ ವಿದ್ಯಾಭ್ಯಾಸವನ್ನು ಮಾಡಲು ಪೂರ್ವ ತಯಾರಿ ಮಾಡುತ್ತಿದ್ದಾರೆ. ಎರಡನೇ ಮಗಳು ರಂಜಿತಾ ಶೆಟ್ಟಿ ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!