ಪುತ್ತೂರು: ತಾಲ್ಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣಾ ಅಧಿಕಾರಿಯಾಗಿ ಹಿರಿಯ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ ರೈ ಇವರಿಂದ ಅಧಿಕೃತವಾಗಿ ಘೋಷಿಸಲು ಬಾಕಿ ಇದೆ. ನಾಮಪತ್ರ ಸಲ್ಲಿಕೆಗೆ ಜೂ. 15 ಕಡೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಹೇಮನಾಥ ಶೆಟ್ಟಿ ಯವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೇಮನಾಥ ಶೆಟ್ಟಿ
1964 ರ ಡಿಸೆಂಬರ್ 21ರಂದು, ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಬನ್ನೂರು ಗುತ್ತು ಮನೆಯಲ್ಲಿ ಕಾವು ಅಂತಪ್ಪ ಶೆಟ್ಟಿ ಮತ್ತು ಬನ್ನೂರು ಗುತ್ತು ತಾರಾ ಅಂತಪ್ಪ ಶೆಟ್ಟಿ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣವನ್ನು ಮಡಿಕೇರಿ ಸೈಂಟ್ ಮೈಕೆಲ್ ಶಾಲೆಯಲ್ಲಿ ಪ್ರಾರಂಭಿಸಿ ನಂತರ ಮಾಡ್ನೂರು ಕಾವು ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪೆರ್ನಾಜೆ ಸೀತಾರಾಘವ ಪ್ರೌಢಶಾಲೆ ಮತ್ತು , ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪಡೆದು, ಸುಳ್ಯ ಕೆ ವಿ ಜಿ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ಶಿಕ್ಷಣವನ್ನು ಅಭ್ಯಸಿಸಿದರು. ಪುತ್ತೂರು ಸಂತಫಿಲೋಮಿನಾ ಕಾಲೇಜಿನಲ್ಲಿ ಬಿ ಎ ಪದವಿ ಶಿಕ್ಷಣವನ್ನು ಪಡೆದರು.ಎನ್ ಎಸ್ ಯು ಐ ಪುತ್ತೂರು ತಾಲೂಕು ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, 9 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿ, ರಾಜಕೀಯವಾಗಿ ಜಿಲ್ಲೆ,ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿಯಾಗಿ ಆರು ವರ್ಷ ಸೇವೆ ಮಾಡಿದ ಇವರು ಇದೀಗ 2 ನೇ ಅವಧಿಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸುಮಾರು 10 ವರುಷಗಳಿಂದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾಗಿದ್ದಾರೆ.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಸಮಿತಿ ಸದಸ್ಯರಾಗಿದ್ದಾರೆ. ಹೇಮನಾಥ ಶೆಟ್ಟಿಯವರ ಪತ್ನಿ ಮುಂಡಾಳ ಗುತ್ತು ಅನಿತಾ ಹೇಮನಾಥ ಶೆಟ್ಟಿ ಯವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ, ಎರಡು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ , ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿದ್ದರು.ಇವರಿಗೆ ಎರಡು ಪುತ್ರಿಯರು ಹಿರಿಯ ಮಗಳು ಡಾ ವಾಸ್ತವಿ ಶೆಟ್ಟಿ MBBS ಮುಗಿಸಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿ ನಂತರ ಪುತ್ತೂರಿನಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಕ್ಲೀನಿಕ್ ನಲ್ಲಿ ಸೇವೆ ಸಲ್ಲಿಸಿ ಈಗ ಉನ್ನತ ವಿದ್ಯಾಭ್ಯಾಸವನ್ನು ಮಾಡಲು ಪೂರ್ವ ತಯಾರಿ ಮಾಡುತ್ತಿದ್ದಾರೆ. ಎರಡನೇ ಮಗಳು ರಂಜಿತಾ ಶೆಟ್ಟಿ ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…